Cauverywater | ಇತ್ತ ಬಂದ್‌, ಪ್ರತಿಭಟನೆ ನಡೆಯುತ್ತಲೇ | ಅತ್ತ ಮತ್ತೆ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಸಿಡಬ್ಲ್ಯೂಆರ್ ಸಿ ನೀಡಿದ ಆದೇಶವನ್ನು ಪ್ರಶ್ನಿಸುತ್ತೇವೆ ಎಂದ ನೀರಾವರಿ ನಿಗಮ ನಿಯಮಿತ ಎಂಡಿ |

September 26, 2023
10:03 PM
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು  ಮುಂದಿನ 18 ದಿನಗಳ ಕಾಲ ತಮಿಳುನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ.

ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್‌ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.

ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು  ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ  ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್​, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror