ಒಂದೆಡೆ ರಾಜ್ಯದ ರೈತರು, ಸಾರ್ವಜನಿಕರು, ಸಾಮಾಜಿಕ ಹೋರಾಟಗಾರರು, ಜೀವನದಿ ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರತಿಭಟನೆ, ಬಂದ್ ಮಾಡ್ತಿದ್ರೆ ಅತ್ತ ರಾಜ್ಯ ಸರ್ಕಾರ ಇದಯಾವುದಕ್ಕೂ ಜಗ್ಗದೆ ತಮಿಳುನಾಡಿಗೆ ನೀರು ಬಿಡುತ್ತಲೇ ಇದೆ. ಕಾವೇರಿ ನೀರು ನಿಯಂತ್ರಣ ಸಮಿತಿಯುಅದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿದೆ.
ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ಮುಂದಿನ 18 ದಿನಗಳ ಕಾಲ ತಮಿಳಿನಾಡುಗೆ ನೀರು ಬಿಡುವಂತೆ ಆದೇಶ ಜಾರಿ ಮಾಡಿದೆ. ದೆಹಲಿಯಲ್ಲಿದು ಸಿಡಬ್ಲ್ಯೂಆರ್ ಸಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡುವಾಗ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಹಳ ಅತಂಕದಲ್ಲಿದ್ದರು. ಇಂದಿನ ಸಭೆಯಲ್ಲಿ ರಾಜ್ಯದ ಪರ ಹಾಜರಿದ್ದ ಅಧಿಕಾರಿಗಳ ನಿಯೋಗದಲ್ಲಿದ್ದ ಮಹೇಶ್, ಕಾವೇರಿ ನೀರು ನಿಯಂತ್ರಣಾ ಸಮಿತಿಯ ಆದೇಶವನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಪ್ರಶ್ನಿಸಲಿದ್ದೇವೆ ಎಂದು ಹೇಳಿದರು. ದಿನಾಂಕಗಳನ್ನು ಪ್ರಾಧಿಕಾರವೇ ಶೆಡ್ಯೂಲ್ ಮಾಡೋದ್ರಿಂದ ಅದರ ಮುಂದೆಯೇ ಸಮಸ್ಯೆ ಇಡುತ್ತೇವೆ, ನೀರು ಬಿಡುವುದು ಸಾಧ್ಯವೇ ಇಲ್ಲ ಅಂತ ಹೇಳಿದರೂ ನೀರು ಬಿಡುವಂತೆ ಆದೇಶಿಸಲಾಗಿದೆ ಎಂದು ಮಹೇಶ್ ಹೇಳಿದರು.
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…