ಪುನೀತ್ ರಾಜ್ ಕುಮಾರ್ ಪಾಠ ಹಂತಹಂತವಾಗಿ ಪಠ್ಯದಲ್ಲಿ ಸೇರಿಸುವ ನಿರ್ಧಾರ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

November 1, 2022
7:38 PM

ನಟ ಪುನೀತ್ ರಾಜಕುಮಾರ್ ಕನ್ನಡ ಭಾಷೆ, ನಾಡಿಗೆ ದುಡಿದಿದ್ದಾರೆ. ಹೀಗಾಗಿ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಪಾಠವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕನ್ನಡ ಧ್ವಜಾರೋಹಣ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಿಎಂ ಬಸವರಾಜ ಬೊಮ್ಮಾಯಿ, ನಟ ಪುನೀತ್ ರಾಜಕುಮಾರ್ ಗೆ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದು ನಮ್ಮ ಬಯಕೆಯಾಗಿತ್ತು. ಶಾಲಾ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ. ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಏನೆಲ್ಲ‌ ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 7, 2026
9:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ
July 7, 2026
8:41 PM
by: ಮಿರರ್‌ ಡೆಸ್ಕ್‌
ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ
July 7, 2026
8:33 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror