ಗ್ರಾಪಂ ಸದಸ್ಯರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

January 10, 2021
9:05 PM
ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್‌ ಗೆ ಒಂದನೇ ವಾರ್ಡ್‌ ನಿಂದ ಆಯ್ಕೆಯಾದ ಗ್ರಾಮಭಾರತ ತಂಡದ ಗ್ರಾ ಪಂ ಸದಸ್ಯರು ಭಾನುವಾರ ವಾರ್ಡ್‌ ನ ಬಳ್ಳಕ್ಕ ಪ್ರದೇಶದ ಜನರಿಂದ ಅಹವಾಲು ಸ್ವೀಕರಿಸಿದರು. ನೂತನ ಗ್ರಾಪಂ ಸದಸ್ಯರು ಬಳ್ಳಕ್ಕ ಪ್ರದೇಶದ ಗ್ರಾಮೀಣ ಜನರ ಸಮಸ್ಯೆ ಹಾಗೂ ಅಭಿವೃದ್ಧಿ ಪರವಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ಅಬಿವೃದ್ಧಿ ಯೋಜನೆಗಳ ಅನುಷ್ಟಾನಕ್ಕೆ ಎಲ್ಲರ ಸಹಕಾರದೊಂದಿಗೆ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಬಳ್ಳಕ್ಕ ಪ್ರದೇಶದಲ್ಲಿ  ಹಲವಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬೇಡಿಕೆ ಈಡೇರಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು. ಬಳ್ಳಕ್ಕ ಪ್ರದೇಶದಲ್ಲಿ ಬಸ್‌ ನಿಲ್ದಾಣ, ಗುತ್ತಿಗಾರು-ಬಳ್ಳಕ್ಕ-ಪಂಜ ಜಿಪಂ ರಸ್ತೆಯ ಚರಂಡಿ ಮೋರಿ ಬ್ಲಾಕ್‌ ಆಗಿರುವುದು , ಬಸ್‌ ಸಮಸ್ಯೆ ಹಾಗೂ ವಿದ್ಯುತ್‌ ಕಂಬ ಅಪಾಯ ಸ್ಥಿತಿಯಲ್ಲಿರುವುದು,.ಮೊಬೈಲ್‌ ನೆಟ್ವರ್ಕ್‌ ಸಮಸ್ಯೆ   ಸೇರಿದಂತೆ ವಿವಿಧ ಸಮಸ್ಯೆಗಳ ಪಟ್ಟಿಯನ್ನು ನೀಡಿದರು.
ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ವಸಂತ ಮೊಗ್ರ  ಮೊದಲಾದವರು ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror