ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನವನ್ನು ನಿಗಧಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಗೌರವಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದ್ದಾರೆ.