ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯದ ನಿರೀಕ್ಷೆ |‌

December 23, 2022
9:18 PM

ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತ್ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ‌ ರಾಜ್ಯ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ರೂ.3,000, ಉಪಾಧ್ಯಕ್ಷರಿಗೆ ರೂ.2,000 ಹಾಗೂ ಸದಸ್ಯರಿಗೆ ರೂ.1000 ಮಾಸಿಕ ಗೌರವಧನವನ್ನು ನಿಗಧಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ಗೌರವಧನವನ್ನು ಪರಿಷ್ಕರಿಸಿ, ಗ್ರಾಮ ಪಂಚಾಯತ್ ಗಳ ಅಧ್ಯಕ್ಷರುಗಳಿಗೆ ರೂ.6,000, ಉಪಾಧ್ಯಕ್ಷರುಗಳಿಗೆ ರೂ.4,000 ಹಾಗೂ ಸದಸ್ಯರುಗಳಿಗೆ ರೂ.2,000 ಮಾಸಿಕ ಗೌರವಧವನ್ನು ಪರಿಷ್ಕರಿಸಿ ನಿಗದಿಗೊಳಿಸಿ ಆದೇಶಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror