ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ. ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490