Advertisement
MIRROR FOCUS

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

Share

ಸಂಪೂರ್ಣವಾಗಿ ಪರಿಸರ ಸ್ನೇಹಿ ಹಾಗೂ ಸುಸ್ಥಿರ ವಿಧಾನದಲ್ಲಿ ತಯಾರಾಗುವ ಹಸಿರು ಅಮೋನಿಯಾ ಖರೀದಿ ಮತ್ತು ಪೂರೈಕೆ ಒಪ್ಪಂದಗಳ ವಿನಿಮಯವು ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜಧಾನಿಯ ಅಟಲ್ ಅಕ್ಷಯ್ ಊರ್ಜಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಅಡಿಯಲ್ಲಿ ರಸಗೊಬ್ಬರ ವಲಯಕ್ಕೆ ಸಂಬಂಧಿಸಿದ ಹಸಿರು ಅಮೋನಿಯಾ ಒಪ್ಪಂದಗಳ ವಿನಿಮಯ ಕಾರ್ಯಕ್ರಮ ನಡೆಯಿತು.

ಭಾರತವು ಇಂದು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನವೀಕರಿಸಬಹುದಾದ ಇಂಧನ ಮಾರುಕಟ್ಟೆಗಳಲ್ಲಿ ಒಂದಾಗಿದ್ದು, 2030ರ ವೇಳೆಗೆ 500 ಗಿಗಾವಾಟ್ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವನ್ನು ಸಾಧಿಸುವ ಗುರಿಯೊಂದಿಗೆ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

ದೀರ್ಘಕಾಲೀನ ಒಪ್ಪಂದಗಳ ಮಹತ್ವ : ಕೈಗಾರಿಕೆಗಳು, S.E.C.I (ಸೋಲಾರ್ ಎನರ್ಜಿ ಕಾರ್ಪೊರೇಶನ್ ಆಫ್ ಇಂಡಿಯಾ) ಮತ್ತು ರಸಗೊಬ್ಬರ ಕಂಪನಿಗಳ ನಡುವೆ 10 ವರ್ಷಗಳ ಅವಧಿಯ ಈ ಒಪ್ಪಂದಗಳು ಕಾರ್ಯಗತಗೊಳಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿವೆ. ಬೇಡಿಕೆಯ ನಿಶ್ಚಿತತೆ, ಹಣಕಾಸು ಹರಿವಿನ ಸ್ಥಿರತೆ, ದೊಡ್ಡ ಹೂಡಿಕೆಗಳಿಗೆ ಉತ್ತೇಜನ ಈ ಎಲ್ಲಾ ಅಂಶಗಳನ್ನು ಇದು ಖಚಿತಪಡಿಸುತ್ತದೆ ಎಂದು ಜೋಶಿ ತಿಳಿಸಿದ್ದಾರೆ.

ಭಾರತ ಸರ್ಕಾರವು ₹19,744 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹಸಿರು ಹೈಡ್ರೋಜನ್ ಮಿಷನ್ ಜಾರಿಗೊಳಿಸುತ್ತಿದೆ. ಈ ಮಿಷನ್ ಮೂಲಕ, ಹಸಿರು ಹೈಡ್ರೋಜನ್ ಉತ್ಪಾದನೆ, ಬಳಕೆ, ರಫ್ತು ಈ ಮೂರು ಕ್ಷೇತ್ರಗಳಲ್ಲಿ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ.

2030ರ ಮಹತ್ವಾಕಾಂಕ್ಷಿ ಗುರಿ :  2030ರ ವೇಳೆಗೆ ವರ್ಷಕ್ಕೆ ಕನಿಷ್ಠ 5 ಮಿಲಿಯನ್ ಮೆಟ್ರಿಕ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಸಾಧಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದ  ಮುಖ್ಯ ಅಂಶಗಳು ಹಸಿರು ಅಮೋನಿಯಾ ಒಪ್ಪಂದ ವಿನಿಮಯ, 10 ವರ್ಷದ ದೀರ್ಘಕಾಲೀನ ಒಪ್ಪಂದ, ₹19,744 ಕೋಟಿ ಮಿಷನ್, 2030ರೊಳಗೆ 5 MMT ಉತ್ಪಾದನೆ ಗುರಿ, 500 GW ನವೀಕರಿಸಬಹುದಾದ ಇಂಧನ ಸಾಮರ್ಥ್ಯ ಗುರಿ ಹೊಂದಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

India has taken a major step toward strengthening its energy security through green ammonia supply and purchase agreements under the National Green Hydrogen Mission. The initiative, backed by ₹19,744 crore, aims to boost investments, ensure demand certainty, and achieve a production target of 5 million metric tonnes of green hydrogen annually by 2030.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

9 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

17 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

21 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 days ago