2030 ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಗುರಿ | ರಾಜ್ಯಸಭೆಯಲ್ಲಿ ಕೇಂದ್ರದ ಘೋಷಣೆ

February 10, 2026
6:43 AM
ರಾಜ್ಯಸಭೆಯಲ್ಲಿ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ 2030ರೊಳಗೆ 5 ಮಿಲಿಯನ್ ಟನ್ ಹಸಿರು ಹೈಡ್ರೋಜನ್ ಉತ್ಪಾದನೆ ಗುರಿ ಘೋಷಿಸಿದರು. 20% ಜೈವಿಕ ಇಂಧನ ಮಿಶ್ರಣ, ಕಲ್ಲಿದ್ದಲು ಅನಿಲೀಕರಣ ಮತ್ತು 2070ರ ಶೂನ್ಯ ವಿಸರ್ಜನೆ ಗುರಿ ಕುರಿತು ವಿವರ.

ದೇಶದಲ್ಲಿ ಹಸಿರು ಇಂಧನ ಹಾಗೂ ಮರುಬಳಕೆ ಇಂಧನ ವಲಯದಲ್ಲಿ ಅಭೂತಪೂರ್ವ ಕೆಲಸಗಳು ನಡೆಯುತ್ತಿವೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಮರುಬಳಕೆ ಇಂಧನದ ವೈವಿಧ್ಯೀಕರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಶೇಕಡಾ 20ರಷ್ಟು ಜೈವಿಕ ಇಂಧನವನ್ನು ಪೆಟ್ರೋಲ್ ಜೊತೆ ಮಿಶ್ರಣಗೊಳಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. 2030ರೊಳಗೆ ಹಸಿರು ಹೈಡ್ರೋಜನ್ ಉತ್ಪಾದನೆಯನ್ನು 5 ಮಿಲಿಯನ್ ಟನ್ ಗಳಿಗೆ ಏರಿಕೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ಹಸಿರು ಹೈಡ್ರೋಜನ್ ಉತ್ಪಾದನೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದರು.

ಕಲ್ಲಿದ್ದಲು ಅನಿಲೀಕರಣ ಸೇರಿದಂತೆ ವಿನೂತನ ಕ್ಷೇತ್ರಗಳಲ್ಲಿ ಹೆಚ್ಚಿನ ಕೆಲಸ ನಡೆಯುತ್ತಿದ್ದು, ಭವಿಷ್ಯದ ಇಂಧನ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಕಲ್ಲಿದ್ದಲು ವಲಯದಲ್ಲಿ 31 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದೇಶದ ದೈನಂದಿನ ಕಚ್ಚಾ ತೈಲ ಬಳಕೆ 5.6 ಮಿಲಿಯನ್ ಟನ್ ಗಳಷ್ಟಿದ್ದು, ಸೌರ ಹಾಗೂ ಇತರ ಶುದ್ಧ ಇಂಧನ ವಲಯಗಳಿಗೆ ಪರಿವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ 2070ರೊಳಗೆ ಶೂನ್ಯ ವಿಸರ್ಜನೆ (Net Zero) ರಾಷ್ಟ್ರೀಯ ಗುರಿಯನ್ನು ತಲುಪುವ ವಿಶ್ವಾಸವಿದೆ ಎಂದು ಪ್ರಶ್ನೆಗೆ ಉತ್ತರಿಸಿದರು.

ಭಾರತ ವಿಶ್ವದ 2ನೇ ಅತಿದೊಡ್ಡ ಕಲ್ಲಿದ್ದಲು ಉತ್ಪಾದಕ ದೇಶವಾಗಿದ್ದು, 2024-25ನೇ ಸಾಲಿನಲ್ಲಿ 1,047 ಮಿಲಿಯನ್ ಟನ್ ಗೂ ಅಧಿಕ ಕಲ್ಲಿದ್ದಲು ಉತ್ಪಾದಿಸಲಾಗಿದೆ. ಆಮದು ಪ್ರಮಾಣ ಇಳಿಕೆಯಾಗುತ್ತಿರುವುದರಿಂದ ಸುಮಾರು 60 ಸಾವಿರ ಕೋಟಿ ರೂಪಾಯಿ ವಿದೇಶಿ ವಿನಿಮಯ ಉಳಿತಾಯವಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ…

ಫೆ.12 ರಿಂದ ಅಂತರಾಷ್ಟ್ರೀಯ ಕಾಫಿ ಉತ್ಸವ | ಜಾಗತಿಕ ಕಾಫಿ ಭೂಪಟದಲ್ಲಿ ಬೆಂಗಳೂರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror