ರಾಜ್ಯದ ಮತದಾರರಿಗೆ ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಕೊಟ್ಟು ಅಧಿಕಾರಕ್ಕೇರಿದ ಕಾಂಗ್ರೆಸ್ ಒಂದೋಂದೇ ಭರವಸೆಗಳನ್ನು ಈಡೇರುಸುತ್ತಿದೆ. ಉಚಿತ ಬಸ್ ಯೋಜನೆ, ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತಂದ ನಂತರ ಈಗ ಎಲ್ಲಾ ಮನೆಗಳಿಗೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಗೃಹ ಜ್ಯೋತಿ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು.
ಮನೆಯೊಂದರ ವಿದ್ಯುತ್ ದೀಪದ ಬಟನ್ ಒತ್ತುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೇ ಸಾಕೇಂತಿಕವಾಗಿ 10 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಶೂನ್ಯ ವಿದ್ಯುತ್ ಬಿಲ್ ಚಲನ್ ನೀಡಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಕೆ.ಜೆ. ಜಾರ್ಜ್ ಹಾಗೂ ಕಲ್ಯಾಣ ಕರ್ನಾಟಕದ ಸಚಿವರು, ಶಾಸಕರು ಪಾಲ್ಗೊಂಡಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel