ಅಡಿಕೆ ಬೆಳೆಯ ಮಧ್ಯೆ ಅಂತರ್ ಬೆಳೆಯಾಗಿ ಕಾಫಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವುದರಿಂದ ಹೆಚ್ಚಿನ ಲಾಭ ಗಳಿಸಬಹುದು ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಸಂಶೋಧನಾ ನಿರ್ದೇಶಕ ಬಿ.ಎಂ. ದುಷ್ಯಂತ ಕುಮಾರ್ ಹೇಳಿದರು. ದಾವಣಗೆರೆ ತಾಲೂಕಿನ ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವತಿಯಿಂದ ರೈತರಿಗೆ ಹಮ್ಮಿಕೊಂಡಿದ್ದ ಕಾಫಿ, ಕಾಳು ಮೆಣಸು ವೈಜ್ಞಾನಿಕ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ಅಡಿಕೆ ಅಥವಾ ಏಕ ಬೆಳೆಯನ್ನು ಮಾಡುವುದು ಮಾರುಕಟ್ಟೆ ಹಾಗೂ ಭವಿಷ್ಯದ ಕೃಷಿಯ ದೃಷ್ಟಿಯಿಂದ ಸಂಕಷ್ಟ ತರುವ ಸಾಧ್ಯತೆ ಇದೆ. ಇದಕ್ಕಾಗಿ ಮಿಶ್ರ ಬೆಳೆ ಅಗತ್ಯ ಎಂದು ಅವರು ಹೇಳಿದ್ದಾರೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…