ಕೃಷಿ ಯಂತ್ರೋಪಕರಣಗಳು ಮತ್ತು ಉಪಕರಣಗಳ ಮೇಲಿನ GST ದರಗಳನ್ನು ಶೇಕಡಾ 12-18 ರಿಂದ ಶೇಕಡಾ 5 ಕ್ಕೆ ಇಳಿಸಿರುವ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದರು.
ಕೃಷಿ ಯಂತ್ರೋಪಕರಣಗಳ GST ಸುಧಾರಣೆಗಳ ಕುರಿತು ನಡೆದ ಸಭೆಯಲ್ಲಿ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ NDA ಸರ್ಕಾರವು ಜನರ ಜೀವನವನ್ನು ಸುಧಾರಿಸುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಇದೀಗ GST ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕೃಷಿಕರಿಗೂ ಅನುಕೂಲ ಆಗಲಿದೆ ಎಂದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ, ಸರ್ಕಾರದ ಯೋಜನೆಗಳು ನೇರವಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ GST ಕಡಿತದಿಂದಾಗಿ ರೈತ ಸಮುದಾಯದ ಆದಾಯದಲ್ಲಿ ಬಹು ದೊಡ್ಡ ಬದಲಾವಣೆ ಆಗಲಿದೆ ಎಂದು ಸಚಿವರು ಹೇಳಿದರು. ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಮೇಲಿನ GST ದರ ಕೂಡ ಕಡಿಮೆಯಾಗಿದೆ. ಇದು ರೈತರಿಗೆ ಪ್ರಯೋಜನವನ್ನು ನೀಡುವುದಲ್ಲದೇ ರಾಸಾಯನಿಕ ಗೊಬ್ಬರಗಳಿಂದ ಜೈವಿಕ ಗೊಬ್ಬರಗಳತ್ತ ಬದಲಾವಣೆಯನ್ನು ಉತ್ತೇಜಿಸುತ್ತದೆ. ಡೈರಿ ವಲಯದಲ್ಲಿ, ಹಾಲು ಮತ್ತು ಚೀಸ್ ಮೇಲಿನ GSTಯನ್ನು ತೆಗೆದುಹಾಕುವುದರಿಂದ ಗ್ರಾಹಕರಿಗೆ ಪ್ರಯೋಜನವಾಗುವುದಲ್ಲದೇ, ರೈತರು, ಜಾನುವಾರು ಸಾಕಣೆದಾರರು ಮತ್ತು ಹಾಲು ಉತ್ಪಾದಕರಿಗೆ ಗಮನಾರ್ಹ ಪರಿಹಾರ ದೊರೆಯುತ್ತದೆ ಎಂದು ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

