Advertisement
MIRROR FOCUS

ಕೃಷಿ ಯಂತ್ರೋಪಕರಣಗಳ ಮೇಲೆ ಜಿಎಸ್‌ಟಿ ದರ ಕಡಿತ ಹಿನ್ನೆಲೆ | ಕೇಂದ್ರ ಸಚಿವ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಭೆ

Share

ಕೃಷಿ ಯಂತ್ರೋಪಕರಣಗಳು ಮತ್ತು ಉಪಕರಣಗಳ ಮೇಲಿನ GST ದರಗಳನ್ನು ಶೇಕಡಾ 12-18 ರಿಂದ ಶೇಕಡಾ 5 ಕ್ಕೆ ಇಳಿಸಿರುವ ಹಿನ್ನೆಲೆಯಲ್ಲಿ ಕೃಷಿ ಕ್ಷೇತ್ರದಲ್ಲಿ ವ್ಯಾಪಕ ಸುಧಾರಣೆ ಸಾಧ್ಯವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ದೆಹಲಿಯಲ್ಲಿ ಹೇಳಿದರು.

ಕೃಷಿ ಯಂತ್ರೋಪಕರಣಗಳ GST ಸುಧಾರಣೆಗಳ ಕುರಿತು ನಡೆದ ಸಭೆಯಲ್ಲಿ ಅವರು,  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ NDA ಸರ್ಕಾರವು ಜನರ ಜೀವನವನ್ನು ಸುಧಾರಿಸುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಇದೀಗ GST ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕೃಷಿಕರಿಗೂ ಅನುಕೂಲ ಆಗಲಿದೆ ಎಂದರು. ಮಧ್ಯವರ್ತಿಗಳ ಹಾವಳಿ ಇಲ್ಲದೇ, ಸರ್ಕಾರದ ಯೋಜನೆಗಳು ನೇರವಾಗಿ ರೈತರಿಗೆ ತಲುಪುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ GST ಕಡಿತದಿಂದಾಗಿ ರೈತ ಸಮುದಾಯದ ಆದಾಯದಲ್ಲಿ ಬಹು ದೊಡ್ಡ ಬದಲಾವಣೆ ಆಗಲಿದೆ ಎಂದು ಸಚಿವರು ಹೇಳಿದರು.  ಜೈವಿಕ ಕೀಟನಾಶಕಗಳು ಮತ್ತು ಸೂಕ್ಷ್ಮ ಪೋಷಕಾಂಶಗಳ ಮೇಲಿನ GST ದರ ಕೂಡ ಕಡಿಮೆಯಾಗಿದೆ. ಇದು ರೈತರಿಗೆ ಪ್ರಯೋಜನವನ್ನು ನೀಡುವುದಲ್ಲದೇ ರಾಸಾಯನಿಕ ಗೊಬ್ಬರಗಳಿಂದ ಜೈವಿಕ ಗೊಬ್ಬರಗಳತ್ತ ಬದಲಾವಣೆಯನ್ನು ಉತ್ತೇಜಿಸುತ್ತದೆ. ಡೈರಿ ವಲಯದಲ್ಲಿ, ಹಾಲು ಮತ್ತು ಚೀಸ್ ಮೇಲಿನ GSTಯನ್ನು ತೆಗೆದುಹಾಕುವುದರಿಂದ ಗ್ರಾಹಕರಿಗೆ ಪ್ರಯೋಜನವಾಗುವುದಲ್ಲದೇ, ರೈತರು, ಜಾನುವಾರು ಸಾಕಣೆದಾರರು ಮತ್ತು ಹಾಲು ಉತ್ಪಾದಕರಿಗೆ ಗಮನಾರ್ಹ ಪರಿಹಾರ ದೊರೆಯುತ್ತದೆ ಎಂದು ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

2 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

10 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

11 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

21 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago