ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಪಂಚ ಗ್ಯಾರಂಟಿ ಯೋಜನೆಯಡಿ ಇದುವರೆಗೆ 97813 ಕೋಟಿ ರೂಪಾಯಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಜಿಎಸ್ಟಿ ಪಾವತಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

