ಗ್ಯಾರಂಟಿ(Guarantee) ಘೋಷಣೆ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇದೀಗ ಒಂದು ವರ್ಷ ಪೂರೈಸಿದೆ. ಸರ್ಕಾರದ ಉಚಿತಗಳು ಇನ್ನು ಮುಂದೆ ಮುಂದುವರೆಯಲ್ಲ. ಕಾಂಗ್ರೆಸ್ ಸರ್ಕಾರ ಇದೆಲ್ಲವನ್ನು ನಿಲ್ಲಿಸುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ (Congress Government) ಜಾರಿಗೊಳಿಸಿದ ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿ ಕೆಲಸಗಳೂ ನಿಂತಿಲ್ಲ. ಮುಂದೆಯೂ ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆ ಬೆಂಗಳೂರು ಪತ್ರಕರ್ತರ ಭವನದಲ್ಲಿ ಮಾಧ್ಯಮ ಸಂವಾದದಲ್ಲಿ ಅಂಶಿ-ಅಂಶಗಳನ್ನು ಬಿಡುಗಡೆಗೊಳಿಸಿದರು.
ಪಂಚ ಗ್ಯಾರಂಟಿಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಗ್ಯಾರಂಟಿಗಳ (Guarantee) ಜೊತೆಗೆ ಅಭಿವೃದ್ಧಿ ಕೆಲಸಗಳೂ ನಿಂತಿಲ್ಲ. ಮುಂದೆಯೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾವು ಅಧಿಕಾರಕ್ಕೆ ಬಂದ 9 ತಿಂಗಳ ಒಳಗೆ 5 ಗ್ಯಾರಂಟಿಗಳನ್ನ ಜಾರಿ ಮಾಡಿದ್ದೇವೆ. ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.
ಶಕ್ತಿ ಯೋಜನೆ (Shakti Scheme) ಅಡಿ 2023ರ ಜೂನ್ ತಿಂಗಳಿನಿಂದ 2024ರ ಏಪ್ರಿಲ್ ವರೆಗೆ 201 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದು, 4,857.95 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ (AnnaBhagya Scheme) 4.10 ಕೋಟಿ ಫಲಾನುಭವಿಗಳು ಉಪಯೋಗ ಪಡೆದುಕೊಂಡಿದ್ದು, 5,754.06 ಕೋಟಿ ರೂ. ವೆಚ್ಚ, ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ವಿದ್ಯುತ್ ನೀಡಲಾಗುತ್ತಿದ್ದು, 1.60 ಕೋಟಿ ಫಲಾನುಭವಿಗಳು ಇದರ ಉಪಯೋಗ ಪಡೆದುಕೊಂಡಿದ್ದಾರೆ. ಇದಕ್ಕೆ 7,436 ಕೋಟಿ ರೂ. ವೆಚ್ಚ ತಗುಲಿದೆ. ಗೃಹಲಕ್ಷ್ಮೀ ಯೋಜನೆ 1.20 ಕೋಟಿ ಫಲಾನುಭವಿಗಳಿಗೆ ತಲುಪಿದ್ದು, 23,290.40 ಕೋಟಿ ರೂ. ವೆಚ್ಚ ಆಗಿದೆ. ಇನ್ನೂ ಯುವನಿಧಿ ಯೋಜನೆಯಿಂದ 1.57 ಲಕ್ಷ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. 5 ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ಲೆಕ್ಕ ಕೊಟ್ಟರು.
ಬಂಡವಾಳ ವೆಚ್ಚ ಬಜೆಟ್‌ನಲ್ಲಿ (Budget) ಇಟ್ಟಿದ್ದಕ್ಕಿಂತ ಹೆಚ್ಚು ಹಣ ಖರ್ಚು ಮಾಡಿದ್ದೇವೆ. ಬಂಡವಾಳ ವೆಚ್ಚ ಅಭಿವೃದ್ಧಿಗೆ ಖರ್ಚು ಮಾಡಲು ಇಡುವ ಹಣ. ಕಳೆದ ಬಜೆಟ್‌ನಲ್ಲಿ ಒಟ್ಟು 54,374 ಕೋಟಿ ಹಣ ಇಟ್ಟಿದ್ವಿ, ಈ ಪೈಕಿ 56,274 ಕೋಟಿ ಖರ್ಚು ಮಾಡಿದ್ದೇವೆ ಎಂದು ಮಾಹಿತಿ ನೀಡಿದರು. ಗ್ಯಾರಂಟಿಗಳ ಹೊರತಾಗಿಯೂ ನೀರಾವರಿಗೆ 16,388 ಕೋಟಿ ರೂ. ಇಟ್ಟಿದ್ವಿ, 18,195 ಕೋಟಿ ರೂ. ಖರ್ಚು ಮಾಡಿದ್ದೇವೆ. ಲೋಕೋಪಯೋಗಿ ಇಲಾಖೆಗೆ 9,727 ಕೋಟಿ ರೂ. ಇಟ್ಟಿದ್ವಿ, 9,641 ಕೋಟಿ ರೂ. ಖರ್ಚು ಮಾಡಿದ್ದೀವಿ. ಹೀಗಿದ್ದರೂ ಸರ್ಕಾರ ಪಾಪರ್ ಆಗ್ಬಿಟ್ಟಿದೆ, ಅಭಿವೃದ್ಧಿ ಆಗ್ತಿಲ್ಲ ಅಂತಾರೆ ಯಡಿಯೂರಪ್ಪ ಎಂದು ತಿರುಗೇಟು ನೀಡಿದರು. ಸುಳ್ಳು ಹೇಳಿದರೂ ಸತ್ಯಕ್ಕೆ ಹತ್ತಿರವಾಗಿರಬೇಕು. ಆದ್ರೆ ಬಿಜೆಪಿ ಅವರದ್ದು ಸುಳಿನ ಪರಮಾವಧಿ. ಆರ್. ಅಶೋಕ್‌ಗೆ, ವಿಜಯೇಂದ್ರನಿಗೆ ಅರ್ಥ ಆಗುತ್ತೋ, ಇಲ್ಲವೋ ಗೊತ್ತಿಲ್ಲ. ಬಂಡವಾಳ ವೆಚ್ಚ ಅಂದ್ರೇನು? ಅಭಿವೃದ್ಧಿಗೆ ಖರ್ಚು ಮಾಡಲು ಇಡುವ ಹಣ ಅಲ್ವಾ? ಅಂತ ಕುಟುಕಿದರು.
ಗ್ಯಾರಂಟಿಗಳಿಂದ ಟಿವಿ, ಫ್ರಿಡ್ಜ್ ತಗೊಂಡಿದ್ದಾರೆ: ಗ್ಯಾರಂಟಿ ಯೋಜನೆಗಳಿಂದ ಜನರು ಟಿವಿ, ಫ್ರಿಡ್ಜ್, ಫ್ಯಾನ್ ಗಳನ್ನೆಲ್ಲಾ ತೆಗೆದುಕೊಂಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಪತ್ರ ಬರೆದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಲ ಮಾಡಿರುವುದು ನಿಜ, ವಿತ್ತೀಯ ಹೊಣೆಗಾರಿಕೆ ಕಾಯ್ದೆ ಪ್ರಕಾರ 25% ಒಳಗೆ ಮಾಡಿದ್ದೇವೆ. ಹೆಚ್ಚಿನ ಸಾಲ ಮಾಡಿಲ್ಲ ಎಂದು ವಿವರಿಸಿದರು.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…