ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ | ಡಾ. ಶರಣ ಪ್ರಕಾಶ್ ಪಾಟೀಲ್

August 23, 2024
7:05 PM

ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ(Rape) ಹಾಗೂ ಕೊಲೆ ಪ್ರಕರಣಕ್ಕೆ(Murder Case) ಸಂಬಂಧಿಸಿದಂತೆ ದೇಶವ್ಯಾಪಿ ನಡೆದ ಪ್ರತಿಭಟೆನೆಗಳ(Protest) ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ(State Govt) ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆನಡೆಸಿದೆ. ಶುಕ್ರವಾರ ವಿಕಾಸ ಸೌಧದಲ್ಲಿ(Vikas Souda) ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ(Medical Education) ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್(Dr. Sharana Prakash Patil) ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.

Advertisement
Advertisement
Advertisement
Advertisement

ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ವಿಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವಂತೆ ಒತ್ತಿಹೇಳಿದರು.

Advertisement

ಈ ಹಿನ್ನೆಲೆಯಲ್ಲಿ ಮಹಿಳಾ ವೈದ್ಯರ ಸುರಕ್ಷತೆಗಾಗಿ ವೈದ್ಯಕೀಯ ಸಮುದಾಯದ ಸಲಹೆ ಸೂಚನೆಗಳಂತೆ ರಾಜ್ಯ ಸರ್ಕಾರವು ಶೀಘ್ರವೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಈ ಮಾರ್ಗಸೂಚಿಗಳು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಅನ್ವಯವಾಗುತ್ತವೆ ಎಂದು ಸಚಿವರು ಮಾಧ್ಯಮಕ್ಕೆ ತಿಳಿಸಿದರು. ಕೊಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ 31 ವರ್ಷದ ವೈದ್ಯೆ ಮೇಲೆ ನಡೆದ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿದ, ಸ್ವತಃ ವೈದ್ಯರಾದ ಡಾ. ಪಾಟೀಲರು ವೃತ್ತಿಪರ ಮಹಿಳೆಯರ ಮೇಲಾಗುವ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ, ಮತ್ತು ಮಹಿಳಾ ವೈದ್ಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನುತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ಪರಿಷ್ಕರಣೆಃ ಮುಷ್ಕರ ಕೈ ಬಿಟ್ಟ ವಿದ್ಯಾರ್ಥಿಗಳು ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರುಗಳ ಶಿಷ್ಯವೇತನ (ಸ್ಟಿಪೆಂಡ್)ವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆನೀಡಿದ್ದರು. ಪರಿಷ್ಕೃತ ವೇತನವ ಆಗಸ್ಟ್ 1ರಿಂದಲೇ ಜಾರಿಗೆ ಬಂದಿದ್ದು, ಶೇ.25ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಶಿಷ್ಯವೇತನ ಹೆಚ್ಚಳ ಮಾಡಿದಬೆನ್ನಲ್ಲೇ ವೈದ್ಯರು ಮುಷ್ಕರನ್ನು ಹಿಂಪಡೆದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror