ಭಾನುವಾರ ಸಂಜೆ ಗುಜರಾತ್‌ನ ಮೋರ್ಬಿ ಸೇತುವೆ ಕುಸಿತದಿಂದ ಇಲ್ಲಿಯವರೆಗೂ 141 ಮಂದಿ ಸಾವನ್ನಪ್ಪಿದ್ದಾರೆ. ಇವರಲ್ಲಿ 12 ಮಂದಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬಕ್ಕೆ ಸೇರಿದವರಾಗಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, ‘ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬದಿಂದ ಬಂದ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ’ ಎಂದಿದ್ದಾರೆ.
ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ.ಘಟನೆಯಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಣೆ ಮಾಡಲಾಗಿದೆ. ಇನ್ನೂ ಸಿಲುಕಿರುವ ಹಲವರನ್ನು ಹೊರತೆಗೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel