ಗುಜರಾತ್‌ ಸೇತುವೆ ದುರಂತ | ಒಟ್ಟು 9 ಮಂದಿ ಬಂಧನ | 2 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನವೀಕರಿಸಿದ ಸಂಸ್ಥೆಯ ವ್ಯವಸ್ಥಾಪಕ ಸಹಿತ ಹಲವರು ಬಂಧನ |

October 31, 2022
7:18 PM

ಗುಜರಾತ್‌ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.

141 ಮಂದಿಯನ್ನು ಬಲಿ ಪಡೆದ ಗುಜರಾತ್​ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.

ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror