ಗುಜರಾತ್ ಮೋರ್ಬಿ ಸೇತುವೆಯನ್ನು ದುರಸ್ತಿ ಮಾಡಿದ ಸಂಸ್ಥೆಯ ಇಬ್ಬರು ವ್ಯವಸ್ಥಾಪಕರು ಸೇರಿದಂತೆ ಒಂಬತ್ತು ಮಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಓರೆವಾ ಗ್ರೂಪ್‌ಗೆ ಸೇತುವೆಯ ನವೀಕರಣ ಮತ್ತು ಕಾರ್ಯಾಚರಣೆಯ ಗುತ್ತಿಗೆಯನ್ನು ನೀಡಲಾಗಿತ್ತು.
141 ಮಂದಿಯನ್ನು ಬಲಿ ಪಡೆದ ಗುಜರಾತ್ನ ಮೊರ್ಬಿಯ ತೂಗು ಸೇತುವೆಯನ್ನು ನವೀಕರಿಸಿದ್ದ ಕಂಪನಿಯ ಇಬ್ಬರು ಸಿಬ್ಬಂದಿಯನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ ಪಡೆಯದೆ ಮತ್ತು ಅವಧಿಗೂ ಮುನ್ನವೇ ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ ಎಂಬ ಆರೋಪಗಳು ಒರೆವಾ ವಿರುದ್ಧ ಕೇಳಿಬಂದಿವೆ.ದುರಂತಕ್ಕೆ ಸಂಬಂಧಿಸಿಂತೆ ಇದು ಮೊದಲ ಬಂಧನವಾಗಿದ್ದು, ಸೇತುವೆಯನ್ನು ನವೀಕರಿಸಿದ ಒರೆವಾ ಕಂಪನಿಯ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಅವರು ಒರೆವಾ ಕಂಪನಿಯ ಮಧ್ಯಮ ಮಟ್ಟದ ಉದ್ಯೋಗಿಗಳು ಎಂದು ಮೂಲಗಳು ತಿಳಿಸಿವೆ.
ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ನವೀಕರಿಸಿದ ಖಾಸಗಿ ಕಂಪನಿಯು, ಹೊಸ ತಂತ್ರಜ್ಞಾನಗಳೊಂದಿಗೆ ಮುಂದಿನ ಹತ್ತು ವರ್ಷಗಳಿಗೆ ಸುರಕ್ಷತೆಯ ಆಧಾರದಲ್ಲಿ ನಿರ್ಮಿಸಿತ್ತು. ಇದಕ್ಕಾಗಿ ಸುಮಾರು 2 ಕೋಟಿ ರೂಪಾಯಿ ವ್ಯಯಿಸಲಾಯಿತ್ತು. ಈ ಸೇತುವೆ ನವೀಕರಿಸಿದ ಒರೆವಾ ಸಮೂಹದ ವ್ಯವಸ್ಥಾಪಕ ನಿರ್ದೇಶಕರು ಅಕ್ಟೋಬರ್ 24 ರಂದು ಪತ್ರಿಕಾಗೋಷ್ಠಿ ನಡೆಸಿ ಮುಂದಿನ ಹತ್ತು ವರ್ಷಗಳ ಅವಧಿಗೆ ಯಾವುದೇ ಸಮಸ್ಯೆ ಇಲ್ಲ ಎಂದೂ ಹೇಳಿದ್ದರು. ಏಳು ತಿಂಗಳ ನವೀಕರಣ ಕಾರ್ಯದ ನಂತರ ಸೇತುವೆಯನ್ನು ಅಧಿಕೃತವಾಗಿ ಪುನಃ ತೆರೆಯಲಾಗಿತ್ತು.
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…