ಬಂಗಾಳಕೂಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ವಿವಿದೆಡೆ ಮಲೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
#WeatherForecast #GulabCyclone pic.twitter.com/nxoDLmKjOG
— theruralmirror (@ruralmirror) September 25, 2021
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪ್ರಭಾವ ತೀವ್ರಗೊಂಡು ಚಂಡಮಾರುತ ರೂಪ ಪಡೆದಿದೆ. ಈ ಚಂಡಮಾರುತವು “ಗುಲಾಬ್” ಹೆಸರಿನಲ್ಲಿ ಪ್ರಭಾವ ಬೀರುತ್ತಿದ್ದು ಒಡಿಶಾ ಹಾಗೂ ಆಂಧ್ರಪ್ರದೇಶದ ಮೇಲೆ ಹೆಚ್ಚಿನ ಪರಿಣಾಮ ಉಂಟು ಮಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಗೋಪಾಲಪುರದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 370 ಕಿ.ಮೀ. ದೂರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದೆ. ಸೆ.26 ಸಂಜೆ ವೇಳೆಗೆ ಭಾರತದ ಪೂರ್ವ ಕರಾವಳಿಯಲ್ಲಿ ‘ಗುಲಾಬ್’ ಚಂಡಮಾರುತ ಎರಡು ರಾಜ್ಯಗಳನ್ನು ಹಾದುಹೋಗಲಿದೆ. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಒಡಿಶಾದ ಏಳು ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ಆಂಧ್ರ ಕರಾವಳಿ ಉತ್ತರ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ಹವಾಮಾನ ಇಲಾಖೆ ನೀಡಿದೆ.