Advertisement
ಸುದ್ದಿಗಳು

ಕೋವಿ ಡಿಪಾಸಿಟ್‌ | ರೈತರು ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಕ್ರಮ | ನಿಯಮದಲ್ಲಿ ಸಡಿಲಿಕೆ |

Share

ಚುನಾವಣೆಯ ಹಿನ್ನೆಲೆಯಲ್ಲಿ  ರೈತರು ಕೋವಿ ಡಿಪಾಸಿಟ್‌ ಮಾಡುವ ಆದೇಶದಲ್ಲಿ  ಕೊಂಚ ವಿನಾಯಿತಿ ರೈತರಿಗೆ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ರೈತರು ಕೋವಿ ಡಿಪಾಸಿಟ್‌ ಬಗ್ಗೆ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರೆ ಅನಿವಾರ್ಯತೆ ಪರಿಶೀಲಿಸಿ ವಿನಾಯಿತಿ ನೀಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

Advertisement
Advertisement
Advertisement

ಚುನಾವಣೆ ಸಂದರ್ಭ  ಶಾಂತಿ ಮತ್ತು ಮುಂಜಾಗ್ರತಾ ಕ್ರಮವಾಗಿ ಶಸ್ತ್ರಾಸ್ತ್ರ ಠೇವಣಿಗೆ ಆದೇಶಿಸಲಾಗುತ್ತದೆ. ಪ್ರತೀ ಬಾರಿಯೂ ಚುನಾವಣೆಯ ಸಮಯದಲ್ಲಿ  ಈ ನಿಯಮ ಇರುತ್ತದೆ. ಕಳೆದ ಎರಡು ಮೂರು ಚುನಾವಣೆಯಿಂದಲೇ ರೈತರು ಈ ನಿಯಮ ಸಡಿಲಿಕೆ ಮಾಡಬೇಕು. ಕೋವಿ ಡಿಪಾಸಿಟ್‌ ಇಡುವ ನಿಯಮ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡುತ್ತಲೇ ಬಂದಿದ್ದರು. ಈ ಬಾರಿಯೂ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ರೈತರಿಗೆ ಆಗುವ ಸಮಸ್ಯೆ ಬಗ್ಗೆಯೂ ಮಾಹಿತಿ ನೀಡಿದ್ದರು. ಕ್ರಿಮಿನಲ್‌ ಹಿನ್ನಲೆಯುಳ್ಳವರಿಗೆ ಡಿಪಾಸಿಟ್‌ ಮಾಡಲು ಸೂಚನೆ ನೀಡಿ, ಉಳಿದ ಕೃಷಿಕರಿಗೆ ವಿನಾಯಿತಿ ನೀಡಿ ಎಂದೂ ಹೇಳಿದ್ದರು. ಇದೀಗ  ದ ಕ ಜಿಲ್ಲಾಧಿಕಾರಿಗಳು ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಲು ದ ಕ ಜಿಲ್ಲೆಯ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ಅಪರಾಧ ಹಿನ್ನಲೆ, ಜಾಮೀನಿನಲ್ಲಿ ಬಿಡುಗಡೆಯಾದವರು, ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ದೊಂಬಿ ಗಲಾಟೆಯಲ್ಲಿ ಭಾಗಿಯಾದವರನ್ನು ಹೊರತುಪಡಿಸಿ ಉಳಿದ ರೈತರಿಗೆ ಶಸ್ತ್ರಾಸ್ತ್ರ ಠೇವಣಿಯಲ್ಲಿ ವಿನಾಯಿತಿ ನೀಡಿದ್ದಾರೆ.

Advertisement

ಆದರೆ ರೈತರು ಬೆಳೆ ರಕ್ಷಣೆಗಾಗಿ ಕೋವಿಯ ಆವಶ್ಯಕತೆ ಇದ್ದರೆ ಪೂರಕ ದಾಖಲೆಗಳೊಂದಿಗೆ ತಾಲೂಕು ತಹಶೀಲ್ದಾರರಿಗೆ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕಾಗಿ ಜಿಲ್ಲೆಯ ಪ್ರತಿ ತಾಲೂಕುಗಳಲ್ಲಿ ಸ್ಕ್ರೀನಿಂಗ್ ಸಮಿತಿಗಳನ್ನು ರಚಿಸಲಾಗಿದೆ.ಈ ಸಮಿತಿ ಅಹವಾಲುಗಳ ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ , ಅವಶ್ಯಕತೆ ಇದ್ದವರಿಗೆ ಠೇವಣಿ ಇಡುವುದರಿಂದ ವಿನಾಯಿತಿ ನೀಡಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |

ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…

2 hours ago

ಸಾವಯವ ಕೃಷಿ ಎಂದರೆ ಏನು..?

https://youtu.be/VwddfpkQ94Y?si=LMz9u08OYbG4B2il

8 hours ago

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |

ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…

8 hours ago

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…

1 day ago

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…

1 day ago