Advertisement
ಸುದ್ದಿಗಳು

ಕೋವಿ ಠೇವಣಾತಿ ಸಮಸ್ಯೆ | ಹೈಕೋರ್ಟ್‌ ಮೊರೆ ಹೋದ ಕೃಷಿಕರು | ಕೋವಿ ಠೇವಣಾತಿ ವಿನಾಯತಿಗೆ ಸ್ಕ್ರೀನಿಂಗ್‌ ಕಮಿಟಿ |

Share

ಪ್ರತೀ ಚುನಾವಣೆಯ ಸಂದರ್ಭ ಕೃಷಿಕರಿಗೆ ಸಮಸ್ಯೆ ಕೋವಿ ಠೇವಣಾತಿಯದ್ದು. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ವಿವಾದ, ಚರ್ಚೆ ನಡೆಯುತ್ತಿತ್ತು. ಈ ಬಾರಿ  ದಕ್ಷಿಣ ಕನ್ನಡ ಜಿಲ್ಲೆಯ 56 ಕೃಷಿಕರು ಒಟ್ಟಾಗಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ತೀರ್ಪು ಕೂಡಾ ಪ್ರಕಟವಾಗಿದೆ. ಚುನಾವಣೆ ಘೋಷಣೆ ಜೊತೆಗೇ ಸ್ಕ್ರೀನಿಂಗ್‌ ಕಮಿಟಿ ಕೂಡಾ ರಚನೆಯಾಗಿ, ಕೃಷಿಕರು ಈ ಕಮಿಟಿಗೆ ಕೋವಿ ವಿನಾಯತಿಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಸ್ಕ್ರೀನಿಂಗ್‌ ಕಮಿಟಿಯು ಚುನಾವಣೆ ಘೋಷಣೆಯ ಜೊತೆಗೇ ರಚನೆಯಾಗಬೇಕಿದೆ.

ಚುನಾವಣಾ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರು ತೀವ್ರ ಅಸಮಾಧಾನಗೊಂಡಿದ್ದರು. ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇಡೀ ದೇಶಕ್ಕೆ ಚುನಾವಣೆ ನಡೆಯಲು ಆಯೋಗಕ್ಕೆ ಒಂದೇ ನಿಯಮ ಇದ್ದರೂ,  ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಆಯಾ ಕ್ಷೇತ್ರ ಚುನಾವಣಾಧಿಕಾರಿಗಳಿಗೆ ಅಧಿಕಾರ  ಇರುತ್ತದೆ. ಆದರೆ ಇಲ್ಲಿ ಕೃಷಿಕರು ಕೋವಿ ಠೇವಣಾತಿ ಇರಿಸುವುದರ ಬಗ್ಗೆ ಚರ್ಚೆ ನಡೆಯುತ್ತಿತ್ತು. ಪರಿಹಾರ ಸಿಕ್ಕಿರಲಿಲ್ಲ.

ಈ ಬಗ್ಗೆ ಸುಳ್ಯ ತಾಲೂಕಿನ ಗುತ್ತಿಗಾರಿನ  ಗಂಗಾಧರ ಭಟ್‌ ಪುಚ್ಚಪ್ಪಾಡಿ ಅವರ ನೇತೃತ್ವದಲ್ಲಿ 56 ಮಂದಿ ಕೋವಿ ಲೈಸನ್ಸ್‌ ಹೊಂದಿದವರು ದಕ ಜಿಲ್ಲೆಯ ಚುನಾವಣಾಧಿಕಾರಿಗಳು ಚುನಾವಣೆಯ ಸಮಯದಲ್ಲಿ  ಹೊರಡಿಸಿದ ಆದೇಶದಲ್ಲಿ ಕಂಡುಬಂದಿರುವ ಕೋವಿ ಠೇವಣಾತಿಯ ವಿನಾಯಿತಿ ಕೃಷಿಕರಿಗೆ ಸಿಗಬೇಕು ಎಂದು ಒತ್ತಾಯಿಸಿ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಎಂ ನಾಗಪ್ರಸನ್ನ ಅವರು, ಚುನಾವಣೆಯ ಘೋಷಣೆ ಸಂದರ್ಭದಲ್ಲಿಯೇ ಸ್ಕ್ರೀನಿಂಗ್‌ ಕಮಿಟಿ ರಚನೆ ಮಾಡಿ ಕೃಷಿಕರು ಈ ಸಮಿತಿಗೆ ಅರ್ಜಿ ಸಲ್ಲಿಸಿ ವಿನಾಯಿತಿ ಪಡೆಯಬೇಕು ಹಾಗೂ ಠೇವಣಾತಿಗೆ ಸಂಬಂಧಿಸಿ ನೋಟೀಸು ಬಂದ 7 ದಿನಗಳ ಒಳಗಾಗಿ ಕೋವಿ ಠೇವಣಾತಿ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಹೀಗಾಗಿ ಇನ್ನು ಚುನಾವಣೆಯ ಸಮಯದಲ್ಲಿ ತಕ್ಷಣವೇ ಸ್ಕ್ರೀನಿಂಗ್‌ ಕಮಿಟಿ ರಚನೆಯಾಗಿ ಕೃಷಿಕರು ಅರ್ಜಿ ಸಲ್ಲಿಸುವ ವ್ಯವಸ್ಥೆ ಹಾಗೂ ಕೃಷಿಕರಿಗೆ ಕೋವಿ ಠೇವಣಾತಿ ವಿನಾಯತಿಗೆ ಅವಕಾಶ ಸಿಗಬೇಕಿದೆ.

ಕೃಷಿಕರ ಪರವಾಗಿ ಹೈಕೋರ್ಟ್‌ ನ್ಯಾಯವಾದಿ ಕೃಷ್ಣಮೂರ್ತಿ ಡಿ ವಾದಿಸಿದ್ದರು. ಸುಳ್ಯದ ನ್ಯಾಯವಾದಿ ಶಂಕರ್‌ ಕುಮಾರ್‌ ಕೆ, ಕರಿಕಳ ಸಹಕರಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

5 hours ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

12 hours ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

1 day ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

3 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

3 days ago