ಚುನಾವಣೆ ಘೋಷಣೆಯಾಗುವ ಜೊತೆಗೇ ಕೃಷಿಕರಿಗೆ ಪ್ರತೀ ಬಾರಿಯೂ ಕೋವಿ ಡಿಪಾಸಿಟ್ ಬಗ್ಗೆ ಕಿರಿಕಿರಿ. ಕಳೆದ ಕೆಲವು ಸಮಯಗಳಿಂದ ಈ ಬಗ್ಗೆ ಕೃಷಿಕರ ವಿರೋಧ ಕೇಳಿಬರುತ್ತಿತ್ತು. ಹಾಗಿದ್ದರೂ ಯಾವುದೇ ಪರಿಹಾರ ಮಾರ್ಗಗಳು ದೊರೆತಿಲ್ಲ. ಇದೀಗ ಕೃಷಿಕರೆಲ್ಲರು ಸಭೆ ಸೇರಿ ಕೋವಿ ಠೇವಣಾತಿಯಿಂದ ವಿನಾಯಿತಿ ಸಿಗಬೇಕು ಎಂದು ಒತ್ತಾಯ ಮಂಡಿಸಿದ್ದಾರೆ.
ಸುಳ್ಯದ ಶಿವಕೃಪಾ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಅನೇಕ ಕೃಷಿಕರು ಭಾಗವಹಿಸಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರತಿ ಚುನಾವಣೆಯ ಸಂದರ್ಭದಲ್ಲೂ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿ ಪೊಲೀಸ್ ಇಲಾಖೆ ಒತ್ತಡ ಹೇರುವುದು ನಡೆಯುತ್ತದೆ. ಆದರೆ ನಮ್ಮ ಕೃಷಿ ಹಾನಿಯಾದರೆ ಇದಕ್ಕೆ ಏನು ಪರಿಹಾರ ಎಂಬುದಕ್ಕೆ ಯಾರಿಂದಲೂ ಉತ್ತರ ಇಲ್ಲ. ಚುನಾವಣೆಯ ಹೆಸರಿನಲ್ಲಿ ಒಂದೆರಡು ತಿಂಗಳುಗಳ ಕಾಲ ರೈತರು ತಮ್ಮ ಕೋವಿಗಳನ್ನು ಡೆಪಾಸಿಟ್ ಮಾಡಬೇಕಾದ ಪರಿಸ್ಥಿತಿ ಬರುತ್ತಿದ್ದು, ಇದರಿಂದ ಕಾಡುಪ್ರಾಣಿಗಳ ಹಾವಳಿ ಉಂಟಾಗಿ ರೈತರಿಗೆ ತೀವ್ರ ನಷ್ಟ ಉಂಟಾಗುತ್ತಿದೆ ಎಂದು ಹಲವು ಕೃಷಿಕರು ಹೇಳಿದರು. ಇಲಾಖೆಗಳಿಂದ ಇದಕ್ಕೆ ಯಾವುದೇ ರೀತಿಯ ಪರಿಹಾರವೂ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಯ ಬಳಿಕ ಸುಳ್ಯ ತಹಶೀಲ್ದಾರ್ ಮೂಲಕ ಕೋವಿ ಠೇವಣಾತಿ ವಿನಾಯಿತಿಗೆ ಮನವಿ ನೀಡಲು ನಿರ್ಧರಿಸಲಾಯಿತು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…