Advertisement
MIRROR FOCUS

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

Share

ರೈತರಿಗೆ ಗನ್ ಪರವಾನಗಿ (Gun License) ನೀಡುವ ಹಾಗೂ ನವೀಕರಣ (Renewal) ಪ್ರಕ್ರಿಯೆಯಲ್ಲಿ ಉಂಟಾಗುತ್ತಿರುವ ವಿಳಂಬವನ್ನು ನಿವಾರಿಸಲು ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಗನ್ ಪರವಾನಗಿ ಸಂಬಂಧಿತ ಅರ್ಜಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಡಿಜಿಟಲ್ ವ್ಯವಸ್ಥೆ ಪರಿಚಯಿಸಲಾಗುತ್ತಿದೆ ಎಂದು ಹೇಳಿದರು. ಈ ಹೊಸ ವ್ಯವಸ್ಥೆ ಇನ್ನೆರಡು ವಾರಗಳೊಳಗೆ ಜಾರಿಗೆ ಬರಲಿದ್ದು, ರೈತರು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಹಾಗೂ ಸ್ಥಿತಿಯನ್ನು ಪರಿಶೀಲಿಸಲು ಅವಕಾಶ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಈ ಕ್ರಮದಿಂದ ರೈತರು ಕಚೇರಿಗಳಿಗೆ ಮರು ಭೇಟಿ ನೀಡುವ ಅಗತ್ಯ ಕಡಿಮೆಯಾಗಲಿದ್ದು, ಪರವಾನಗಿ ನೀಡುವ ಪ್ರಕ್ರಿಯೆ ಹೆಚ್ಚು ಪಾರದರ್ಶಕ ಹಾಗೂ ವೇಗವಾಗಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಮಾತನಾಡಿ, ಪರವಾನಗಿ ಹೊಂದಿದ ಕೆಲವು ಗನ್ಗಳನ್ನು ಬೆದರಿಕೆ ಪ್ರಕರಣಗಳು ಹಾಗೂ ಕಾಡುಹಂದಿ ಹತ್ಯೆ ಪ್ರಕರಣಗಳಲ್ಲಿ ಬಳಸಿದ ಉದಾಹರಣೆಗಳು ಕಂಡುಬಂದಿವೆ ಎಂದು ಹೇಳಿದರು. ಹೀಗಾಗಿ ಗನ್‌ಗಳ ಅನಧಿಕೃತ ಬಳಕೆಯನ್ನು ತಡೆಗಟ್ಟುವ ದೃಷ್ಟಿಯಿಂದ ನಿಯಮಿತ ಪರಿಶೀಲನೆ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಜಿಲ್ಲಾ ಆಡಳಿತದ ಈ ಹೊಸ ಆನ್ಲೈನ್ ವ್ಯವಸ್ಥೆ ರೈತರಿಗೆ ಅನುಕೂಲವಾಗುವ ಜೊತೆಗೆ, ಗನ್ ಪರವಾನಗಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನಿಯಂತ್ರಣವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Dakshina Kannada Deputy Commissioner Darshan H.V announced that an online system will soon be introduced to simplify gun license issuance and renewal for farmers. The system, expected within two weeks, aims to reduce delays, improve transparency, and make the process more convenient while ensuring stricter monitoring of licensed firearms.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

3 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

3 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

14 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

19 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

19 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

19 hours ago