ಗೂನಡ್ಕಕ್ಕೆ ಕೆಪಿಸಿಸಿ ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಭೇಟಿ

November 23, 2020
12:09 PM

ಕೆ.ಪಿ.ಸಿ.ಸಿ.ಕಾನೂನು ಹಾಗೂ ಮಾನವ ಹಕ್ಕು ವಿಭಾಗದ ಅಧ್ಯಕ್ಷರು ಮತ್ತು ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣರವರು ಸಂಪಾಜೆ ಗ್ರಾಮದ ಗೂನಡ್ಕಕ್ಕೆ ನ.22 ರಂದು ಭೇಟಿ ನೀಡಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರ ಕಚೇರಿಯಲ್ಲಿ ನಡೆದ ಸಂಪಾಜೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

Advertisement
Advertisement
Advertisement
Advertisement

ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕರವರು “ಸಂಪಾಜೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ ಇದು ಎಲ್ಲಾ ಚುನಾವಣೆಗಳಲ್ಲಿಯೂ ಸಾಬೀತಾಗಿದೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು 14 ರಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಗುರಿಯನ್ನು ಇಟ್ಟುಕೊಂಡು ನಾವು ಕಾರ್ಯನಿರ್ವಹಿಸಲಿದ್ದೇವೆ” ಎಂದು ತಿಳಿಸಿದರು.

Advertisement

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎ.ಎಸ್.ಪೊನ್ನಣ್ಣರವರು “ಕಾಂಗ್ರೆಸ್ ಪಕ್ಷವನ್ನು ಪ್ರಸ್ತುತ ಸನ್ನಿವೇಶದಲ್ಲಿ ತಳಹಂತದಿಂದ ಗಟ್ಟಿಗೊಳಿಸಬೇಕಾದ ಅನಿರ್ವಾಯತೆ ಇದೆ. ಆ ಕಾರ್ಯವನ್ನು ಸಂಪಾಜೆ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಆ ಕಾರಣದಿಂದ ಇಲ್ಲಿ ಪಕ್ಷ ಬಲಿಷ್ಠವಾಗಿದೆ. ಮುಂದೆಯೂ ಇನ್ನಷ್ಟು ಸದೃಢವಾಗಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಲಿ” ಎಂದು ಆಶಿಸಿದರು.
ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ರವರು ಮಾತನಾಡಿ “ತಳಹಂತದ ಕಾರ್ಯಕರ್ತರಿಗೆ ಪ್ರಾಮುಖ್ಯತೆ ಸಿಗಬೇಕೇ ಹೊರತು ಪಕ್ಷಕ್ಕೆ ಅಧಿಕಾರ ಸಿಕ್ಕಾಗ ಮಾತ್ರ ಬರುವ ನಾಯಕರಿಗಲ್ಲ” ಎಂದವರು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ್ ಕೊಯಂಗಾಜೆಯವರು “ಸಂಪಾಜೆ ಗ್ರಾಮದಲ್ಲಿ ನಾವು ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷದ ಹಿತಕ್ಕಾಗಿ ದುಡಿದಿದ್ದೇವೆ. ಮುಂದೆಯೂ ಕೂಡ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ” ಎಂದು ತಿಳಿಸಿದರು.

Advertisement

ಕೆ.ಪಿ.ಸಿ.ಸಿ.ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್, ನಾಪೋಕ್ಲ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್ ,ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಹಾಂ , ಪ್ರಮುಖರಾದ ಮೋಹಿನಿ ವಸಂತ ಗೌಡ ಪೆಲ್ತಡ್ಕ , ಮಹಮ್ಮದ್ ಕುಂಞ ಗೂನಡ್ಕ, ದಿನಕರ ಗೌಡ ಸಣ್ಣಮನೆ, ಧರ್ಮಪಾಲ ಕೊಯಂಗಾಜೆ, ಜಿ.ಕೆ.ಹಮೀದ್, ಸುರಯ್ಯಾ, ಸೂರಜ್ ಹೊಸೂರು, ಎಸ್.ಪಿ.ಹನೀಫ್, ತಾಜ್ ಮಹಮ್ಮದ್, ಪುಟ್ಟಯ್ಯ ಗೌಡ, ಎಸ್.ಕೆ.ಹನೀಫ್, ಬಾಲಚಂದ್ರ, ತಾಜುದ್ದೀನ್ ಅರಂತೋಡು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror