ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರಿಗೆ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ |

April 12, 2022
8:01 PM

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರದಿಂದ ಕೊಡಮಾಡುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ’ಗೆ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಎ.14 ರಂದು ಬೆಳಗ್ಗೆ 10.30ಕ್ಕೆ  ಪ್ರಶಸ್ತಿ ಪ್ರದಾನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರಶಸ್ತಿಯು 5 ಲಕ್ಷ ರೂ. ನಗದು, 20 ಗ್ರಾಂನ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಬಾಳೇಪುಣಿ ಅವರಿಗೆ ಈ ಹಿಂದೆ 2011ರಲ್ಲಿ ರಾಷ್ಟ್ರಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ, 2004ರಲ್ಲಿ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿ, 2014ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, 2012ರಲ್ಲಿ ಕಾಂತಾವರ ಪುರಸ್ಕಾರ ದೊರೆತಿದೆ.

ಹೊಸ ದಿಗಂತ ಪತ್ರಿಕೆಯಲ್ಲಿ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಗುರುವಪ್ಪ ಎನ್‌ ಟಿ ಬಾಳೇಪುಣಿ ಅವರು, ಪತ್ರಿಕೋದ್ಯಮದಲ್ಲಿ ಒಟ್ಟು 36 ವರ್ಷಗಳ ಅನುಭವ ಹೊಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror