ಗುತ್ತಿಗಾರು ಸಹಕಾರಿ ಸಂಘದ ಮಹಾಸಭೆ | ಶೇ.7 ಡಿವಿಡೆಂಟ್ ಘೋಷಣೆ | 434 ಕೋಟಿ ರೂಪಾಯಿ ವ್ಯವಹಾರ | 1.42 ರೂಪಾಯಿ ಕೋಟಿ ಲಾಭ |

September 25, 2022
7:16 PM

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ (Guthigar PAC Bank) ಸಂಘದ ವಾರ್ಷಿಕ ಮಹಾಸಭೆಯು ಸಹಕಾರಿ  ಸಂಘದ ದೀನದಯಾಳ್ ಸಭಾಭವನದಲ್ಲಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಸುಳ್ಯ ತಾಲೂಕಿನ ಪ್ರತಿಷ್ಟಿತ ಸಹಕಾರಿ ಸಂಘಗಳಲ್ಲಿ ಒಂದಾಗಿರುವ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ಶನಿವಾರ ನಡೆಯಿತು.  ಪ್ರಸಕ್ತ ಸಾಲಿನಲ್ಲಿ ಸಂಘವು 434 ಕೋಟಿ ರೂಪಾಯಿ ವ್ಯವಹಾರ ನಡೆಸಿ ‍ 1.42 ಕೋಟಿ ರೂಪಾಯಿ ಲಾಭಾಂಶ ಪಡೆದಿದೆ. ಸದಸ್ಯರಿಗೆ ಶೇ.7 ಡಿವಿಡೆಂಟ್ ಘೋಷಿಸಲಾಯಿತು.

ಈ ಸಂದರ್ಭ ಕ್ಯಾಂಪ್ಕೋ ಗೆ ಅತಿ ಹೆಚ್ಚು ಅಡಿಕೆ ಮಾರಾಟ ಮಾಡಿದ ರತ್ನ ಎಂ ಮುಂಡೋಡಿ, ಕೊಕ್ಕೋ ಮಾರಾಟ ಮಾಡಿದ ವಿಭಾಗದಲ್ಲಿ ನಾಗಪ್ಪ ಗೌಡ, ತಿರುಮಲೇಶ್ವರ್ ಭಟ್ ಚಣಿಲ, ಕಮಲಾಕ್ಷ ಸಂಪ್ಯಾಡಿ, ಅತೀ ಹೆಚ್ಚು ರಸಗೊಬ್ಬರ ಖರೀದಿಗಾಗಿ ಮುಳಿಯ ಕೇಶವ ಭಟ್, ದಯಾನಂದ ಮುತ್ಲಾಜೆ , ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗಾಗಿ ಸೌರಭ ಟ್ರಾವೆಲ್ಸ್ ನ ಕುಮಾರ್, ಶ್ರೇಯಸ್ ಎಂ ಡಿ ಹೆಚ್ಚು ದಿನಸಿ ಖರೀದಿಗಾಗಿ ಶಿವಪ್ರಕಾಶ್ ಕಡಪಳ, ಪದ್ಮನಾಭ ಕಾಜಿಮಡ್ಕ ದಯಾನಂದ ಮುತ್ತಾಜೆ, ಅತೀ ಹೆಚ್ಚು ದಿನಸಿ ಖರೀದಿ ಮಾಡಿದ ಸಂಸ್ಥೆಯ ಸಲುವಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪರವಾಗಿ ವ್ಯವಸ್ಥಾಪನ ಸಮಿತಿ ಸದಸ್ಯ ಚಂದ್ರಶೇಖರ ಬಾಳುಗೋಡು, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಪರವಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಣ್ಣಗೌಡ ಮತ್ತು ಲಿಂಗಪ್ಪ ಕಾಜಿಮಡ್ಕ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ, ಎ.ವಿ ತೀರ್ಥರಾಮ, ಕೇಶವ ಭಟ್ ಮುಳಿಯ, ಮಂಜುಳಾ ಮುತ್ಲಾಜೆ, ರವಿಪ್ರಕಾಶ್ ಬಳ್ಳಕ್ಕ ,ಕೃಷ್ಣಯ್ಯ ಮೂಲೆತೋಟ, ಜಯಪ್ರಕಾಶ್ ಮೊಗ್ರ, ನವೀನ್ ಬಾಳುಗೋಡು,  ಚಂದ್ರಾವತಿ ಮುಂಡೋಡಿ, ಕುಂಞ ಬಳ್ಳಕ್ಕ, ಆನಂದ ಹಲಸಿನಡ್ಕ ಉಪಸ್ಥಿತರಿದ್ದರು.

ವೆಂಕಟ್ ದಂಬೆಕೋಡಿ ಸ್ವಾಗತಿಸಿ ಶರತ್ ಎ.ಕೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಎ ಕೆ ವರದಿ ವಾಚಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎ.ವಿ ತೀರ್ಥರಾಮ, ಕೇಂದ್ರ ರಬ್ಬರ್ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಮುಳಿಯ ಕೇಶವ ಭಟ್, ಅವರನ್ನು ಸನ್ಮಾನಿಸಲಾಯಿತು. ಇತ್ತೀಚೆಗೆ ನಿವೃತ್ತರಾದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಯ್ಯ ಗೌಡ ಸಂಪ್ಯಾಡಿ ಮತ್ತು ಜಯಂತಿ ದಂಪತಿಗಳನ್ನು ಗೌರವಿಸಲಾಯಿತು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group