ಗುತ್ತಿಗಾರು | ಬಳ್ಳಕ್ಕದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ |

June 25, 2022
10:16 AM

ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಗ್ರಾಪಂ ವತಿಯಿಂದ ನಿರ್ಮಾಣವಾದ ಕುಡಿಯುವ ನೀರಿನ ವ್ಯವಸ್ಥೆಗೆ  ಚಾಲನೆ ನೀಡಲಾಯಿತು. ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್‌ ಕಮಿಲ ಹಾಗೂ ವಸಂತ ಮೊಗ್ರ ಉಪಸ್ಥಿತರಿದ್ದರು.

ಗುತ್ತಿಗಾರು ಗ್ರಾಮದ ಬಳ್ಳಕ್ಕದ ಕಾಲನಿಯ ಕೆಲವು ಮನೆಗಳಿಗೆ ಹಲವು ವರ್ಷಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಇದ್ದಿರಲಿಲ್ಲ. ಸಮೀಪದ ಹೊಳೆಯಿಂದ ಅಥವಾ ಆಸುಪಾಸಿನ ಮನೆಗಳಿಂದ ನೀರನ್ನು ಹೊತ್ತ ತರಬೇಕಿತ್ತು. ಮಳೆಗಾಲ ಹೊಳೆಯ ಕಲುಷಿತ ನೀರನ್ನೇ ಕುಡಿಯಬೇಕಾದ ಸ್ಥಿತಿ ಇತ್ತು. ಈ ಬಗ್ಗೆ ಗ್ರಾಪಂ ಯೋಜನೆಯನ್ನು ಬಳಸಿಕೊಂಡು ಗ್ರಾಪಂ ಸದಸ್ಯರು ಈ ಮನೆಗಳಿಗೆ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದರು. ಶುಕ್ರವಾರ ಮನೆಗಳಿಗೆ ನೀರಿನ ಬಳಕೆಗೆ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭ ಗ್ರಾಪಂ ಸದಸ್ಯರುಗಳಾದ ಎಂ ಕೆ ಶಾರದಾ, ಲತಾ ಕುಮಾರಿ, ಭರತ್‌ ಕಮಿಲ ಹಾಗೂ ವಸಂತ ಮೊಗ್ರ , ಗ್ರಾಮ ಭಾರತ ತಂಡದ ಸಂಚಾಲಕ ಸುಧಾಕರ ಮಲ್ಕಜೆ, ಪ್ರಮುಖರಾದ ಬಿಟ್ಟಿ ನೆಡುನೀಲಂ, ಮಹೇಶ್‌ ಪುಚ್ಚಪ್ಪಾಡಿ, ಕಾಮಗಾರಿ ನಡೆಸಿದ ಅಚ್ಚುತ ಮಲ್ಕಜೆ ಹಾಗೂ ಸ್ಥಳೀಯರಾದ ಕುಸುಮಾಧರ, ವಿಶ್ವನಾಥ ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror