Advertisement
ಸುದ್ದಿಗಳು

ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

Share

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ ಕೊರೋನಾ ಇಲ್ಲ ಎಂದು ಹೇಳಲಾಗುತ್ತಿದೆ. ಆರೋಗ್ಯ ಇಲಾಖೆ ಕೂಡ ಈ ಬಗ್ಗೆ ಸ್ಪಷ್ಟನೆ ನೀಡುತ್ತಿದೆ. ಆದರೆ ಭಾರಿ ಸಂಖ್ಯೆಯಲ್ಲಿ ಜನ ಶೀತ, ಕೆಮ್ಮು ನೆಗಡಿಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಈಗಿನ ಹವಾಮಾನ ವೈಪರೀತ್ಯದ ಕಾರಣದಿಂದ ಆರೋಗ್ಯದಲ್ಲೂ ವ್ಯತ್ಯಾಸ ಕಂಡುಬರುತ್ತಿದೆ. ವಿಪರೀತ ಉಷ್ಣತೆಯ ಕಾರಣದಿಂದ ಸಾಮಾನ್ಯವಾಗಿ ಈ ಸಮಯದಲ್ಲಿ ಜ್ವರ, ಕೆಮ್ಮು, ಕಫ ಕಂಡುಬರುತ್ತದೆ. ಆದರೆ ಎರಡು ವರ್ಷಗಳ ಹಿಂದೆ ಬಾಧಿಸಿರುವ ಕೊರೋನಾ ಈಗ ಎಲ್ಲದಕ್ಕೂ ಭಯ ತಂದಿರಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

22 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago