ರಾಜ್ಯದಲ್ಲಿ H3N2 ಸೋಂಕು ಪತ್ತೆ | 26 ಜನರಲ್ಲಿ ಪತ್ತೆಯಾದ ವೈರಸ್‌ | ಎಚ್ಚರದಿಂದಿರಿ ಇಲಾಖೆ ಸೂಚನೆ |

March 6, 2023
3:01 PM

ರಾಜ್ಯದಲ್ಲಿ ದೀರ್ಘಕಾಲಿಕ ಕೆಮ್ಮು ಹಾಗೂ ಜ್ವರ ಲಕ್ಷಣದ H3N2 ಸೋಂಕು ಉಲ್ಬಣದ ಆತಂಕದ ಹಿನ್ನೆಲೆಯಲ್ಲಿ ಸೋಮವಾರ ಆರೋಗ್ಯ ಸಚಿವ ಡಾ. ಸುಧಾಕರ್ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.

Advertisement

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದಲ್ಲಿ H3N2 ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಲಾಗಿದೆ. H3N2 ಸೋಂಕಿನ ಬಗ್ಗೆ ಯಾರೂ ಗಾಬರಿಪಡಬೇಕಿಲ್ಲ. ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಂದಿನಿಂದಲೇ ಆರೋಗ್ಯ ಸಿಬ್ಬಂದಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ರಾಜ್ಯದಲ್ಲಿ H3N2 ಪ್ರಕರಣಗಳು ಪತ್ತೆಯಾಗಿದೆ. ಇದುವರೆಗೆ 26 ಸೋಂಕು ಪತ್ತೆಯಾಗಿವೆ. ಮಕ್ಕಳು ಹಾಗೂ ಗರ್ಭಿಣಿಯರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

Advertisement

ದೀರ್ಘಕಾಲದಿಂದ ಕೆಮ್ಮು ಹಾಗೂ ಜ್ವರದ ಲಕ್ಷಣ ಇದ್ದರೆ H3N2 ವೈರಸ್ ಕಾರಣವಾಗಿರಬಹುದು. ದೇಶಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ರೋಗಲಕ್ಷಣ ಉಂಟಾದರೆ ಪರೀಕ್ಷೆ ನಡೆಸಿ ಔಷಧಿ ಪಡೆಯುವಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಎಚ್ಚರಿಕೆ ನೀಡಿದೆ.

ಬೇಸಿಗೆ ಪ್ರವೇಶದಿಂದ ತಾಪಮಾನ ಏರಿಕೆಯ ಕಾರಣದಿಂದ  ಬಿಸಿ‌ಗಾಳಿಗೆ ಸಾಕಷ್ಟು ಜನರು ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಿಸಿಲಿನಲ್ಲಿ ಓಡಾಟ ಕಡಿಮೆ ಮಾಡಿ.‌ ಹೆಚ್ಚು ನೀರನ್ನು ಪ್ರತಿನಿತ್ಯ ಕುಡಿಯಬೇಕು ಎಂದು ಮನವಿ ಮಾಡಿದರು. H3N2 ಇದು ಅಪಾಯಕಾರಿ ಅಲ್ಲ, ಕೋವಿಡ್ ಬಂದವರಿಗೆ ಸ್ವಲ್ಪ ದೀರ್ಘ ಕಾಲದ ಕೆಮ್ಮು ಇರುತ್ತದೆ. ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು ಆದರೆ ಸಾಂಕ್ರಾಮಿಕ ಹರಡುವ ಅಪಾಯ ಇದೆ ಎಂದು ಹೇಳಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ನಷ್ಟ ಪರಿಹಾರ ಸಿಗಲಿದೆ
July 8, 2025
10:30 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ
July 8, 2025
8:44 PM
by: The Rural Mirror ಸುದ್ದಿಜಾಲ
ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?
July 8, 2025
8:15 PM
by: The Rural Mirror ಸುದ್ದಿಜಾಲ
ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?
July 8, 2025
8:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group