ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

May 2, 2026
10:37 AM
ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ. ಕೋಳಿ ಫಾರಂಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಿ 2 ಲಕ್ಷಕ್ಕೂ ಹೆಚ್ಚು ಪಕ್ಷಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ತುಮಕೂರು ಜಿಲ್ಲೆಯ ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ವ್ಯಾಪ್ತಿಯ ಬೊಮ್ಮನಹಳ್ಳಿ, ಕೋಳಿಹಳ್ಳಿ ಹಾಗೂ ಗೂಳೂರು ಹೋಬಳಿ ವ್ಯಾಪ್ತಿಯ ಬೈರಸಂದ್ರ ಮತ್ತು ಹುಲ್ಲೇನಹಳ್ಳಿ ಗ್ರಾಮಗಳಲ್ಲಿ ಸಾವನ್ನಪ್ಪಿದ ನವಿಲುಗಳಲ್ಲಿ H5N1 avian influenza ಸೋಂಕು ದೃಢಪಟ್ಟಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಈ ಪ್ರದೇಶದಲ್ಲಿ 45 ನವಿಲುಗಳು ಸಂಶಯಾಸ್ಪದವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮಾದರಿಗಳನ್ನು ರಾಷ್ಟ್ರೀಯ ಹಕ್ಕಿ ಸುರಕ್ಷತಾ ( National Institute of High Security Animal Diseases)  ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿರುವುದರಿಂದ ಈ ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ 10ಕ್ಕೂ ಹೆಚ್ಚು ಕೋಳಿ ಫಾರಂಗಳ ಮೇಲೆ ಕಟ್ಟುನಿಟ್ಟಿನ ನಿಗಾವಹಿಸಲಾಗುತ್ತಿದೆ.

ಸಂಬಂಧಿತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಪಕ್ಷಿಗಳನ್ನು ಗುರುತಿಸಲಾಗಿದ್ದು, ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ನಿರಂತರ ನಿಗಾವಹಿಸಿ ಕ್ವಾರಂಟೈನ್ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.

ಈ ಬೆಳವಣಿಗೆ ಹಿನ್ನೆಲೆ, ಸಾರ್ವಜನಿಕರು ಎಚ್ಚರಿಕೆ ವಹಿಸಲು ಹಾಗೂ ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

H5N1 bird flu has been confirmed in peacocks in four villages of Tumakuru district. Authorities have declared containment zones and are monitoring poultry farms and over 2 lakh birds to prevent further spread.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ
June 14, 2026
3:27 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror