ಹೊಟ್ಟೆ ನೋವೆಂದು ಮಡಿಕೇರಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 1.5 ಕೆಜಿ ಕೂದಲು ಪತ್ತೆಯಾಗಿದೆ. ವೈದ್ಯರು ಯಶಸ್ವಿಯಾಗಿ ಆಪರೇಷನ್ ಮೂಲಕ ಹೊರತೆಗೆದ ಘಟನೆ ನಡೆದಿದೆ.
ಮಹಿಳೆ ಹೊಟ್ಟೆನೋವೆಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಆಕೆಯ ಹೊಟ್ಟೆಯಲ್ಲಿ ಗಡ್ಡೆಯಾಕಾರಾದಲ್ಲಿ ಇರುವುದು ತಿಳಿದುಬಂತು. ಬಳಿಕ ಆಪರೇಷನ್ ಮಾಡಿದ ವೈದ್ಯರಿಗೆ ಅಚ್ಚರಿ ಕಾದಿತ್ತು. ಆಕೆಯ ಹೊಟ್ಟೆಯಲ್ಲಿ 1.5 ಕೆಜಿ ತೂಕದ ಕೂದಲಿನ ಉಂಡೆ ಪತ್ತೆಯಾಯಿತು.ಮಡಿಕೇರಿಯ ಕೊಡಗು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಈ ಘಟನೆ ನಡೆದಿದ್ದು, ಡಾ. ಅಜಿತ್ ಕುಮಾರ್ ನೇತೃತ್ವದ ವೈದ್ಯರ ತಂಡ ಮೂರೂವರೆ ಗಂಟೆಗಳ ಕಾಲ ಆಪರೇಷನ್ ಮಾಡಿ ಮಹಿಳೆಯ ಹೊಟ್ಟೆಯಿಂದ 1.5 ಕೆಜಿ ತೂಕದ ಕೂದಲನ್ನು ಹೊರಗೆ ತೆಗೆದಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…