110 ಹಳ್ಳಿಗಳ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಸೂಚನೆ

January 30, 2025
7:11 AM

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗಳಲ್ಲಿ ಬರುವ ಕೊಳವೆ ಬಾವಿಗಳನ್ನು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲು ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಯಲಹಂಕ ವಲಯ ವ್ಯಾಪ್ತಿಯಲ್ಲಿ “ಮುಖ್ಯ ಆಯುಕ್ತರ ನಡೆ ವಲಯದ ಕಡೆ”ಯಲ್ಲಿ  ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ವೇಳೆ, ಸಾರ್ವಜನಿಕರೊಬ್ಬರು ಮಾತನಾಡಿ 110 ಹಳ್ಳಿಗಳ ಪೈಕಿ ಥಣಿಸಂದ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ನಗರದಲ್ಲಿ ಜಲಮಂಡಳಿ ವತಿಯಿಂದ ಕಾವೇರಿ 5ನೇ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಬಹುತೇಕ ಕಡೆ ಕಾವೇರಿ ನೀರಿನ ಸಂಪರ್ಕವನ್ನು ನೀಡಲಾಗಿದೆ. ಈ ಸಂಬಂಧ ಪಾಲಿಕೆ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror