Advertisement
ಸುದ್ದಿಗಳು

ಆರೋಗ್ಯ ವೃದ್ಧಿಗೆ ಸಿರಿಧಾನ್ಯ, ಸಾವಯವ ಉತ್ಪನ್ನಗಳ ಬಳಸಿ

Share

ಸಿರಿಧಾನ್ಯಗಳು ಹಾಗೂ ಸಾವಯವ ಆಹಾರ ಉತ್ಪನ್ನಗಳ ಬಳಕೆಯಿಂದ ಆರೋಗ್ಯವನ್ನು ಉತ್ತಮಪಡಿಸಬಹುದು ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಹಾರ ಪದಾರ್ಥಗಳಲ್ಲಿ ವಿಷಕಾರಿ ಅಂಶಗಳು ಹೆಚ್ಚಾಗಿ ಮನುಷ್ಯನ ದೇಹ ಸೇರುತ್ತಿವೆ ಎಂದು ಎಚ್ಚರಿಸಿದರು. “ನಾವು ಸೇವಿಸುವ ಆಹಾರದಲ್ಲಿ ವಿಷಪದಾರ್ಥಗಳ ಪ್ರಮಾಣ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಗಂಭೀರವಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಆರೋಗ್ಯಕರ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯ,” ಎಂದು ಜಿಲ್ಲಾಧಿಕಾರಿ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉದ್ಯಮವಾಗಿ ಪರಿವರ್ತನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಸಾವಯವ ಕೃಷಿ ಹಾಗೂ ಗುಣಮಟ್ಟದ ಆಹಾರ ಉತ್ಪನ್ನಗಳ ಬಳಕೆ ಸವಾಲಿನ ಕೆಲಸವಾಗಿದೆ ಎಂದು ಲತಾ ಕುಮಾರಿ ಹೇಳಿದರು. ಸಾವಯವ ಕೃಷಿ ಪದ್ಧತಿಗಳು ರೈತರಿಗೂ ಮತ್ತು ಗ್ರಾಹಕರಿಗೂ ಆರೋಗ್ಯದ ದೃಷ್ಟಿಯಿಂದ ಲಾಭದಾಯಕವಾಗಿವೆ. ಆದರೆ ಜನರಲ್ಲಿ ಜಾಗೃತಿ ಕೊರತೆಯಿಂದ ಸಾವಯವ ಉತ್ಪನ್ನಗಳ ಬಳಕೆ ಇನ್ನೂ ಅಪೇಕ್ಷಿತ ಮಟ್ಟಕ್ಕೆ ತಲುಪಿಲ್ಲ ಎಂದು ಅವರು ತಿಳಿಸಿದರು.

ಸಿರಿಧಾನ್ಯಗಳು ಪೌಷ್ಟಿಕಾಂಶಗಳಿಂದ ತುಂಬಿದ್ದು, ಮಧುಮೇಹ, ಹೃದಯ ಕಾಯಿಲೆ ಹಾಗೂ ಜೀವನಶೈಲಿ ರೋಗಗಳನ್ನು ನಿಯಂತ್ರಿಸಲು ಸಹಕಾರಿ ಎಂದು ಜಿಲ್ಲಾಧಿಕಾರಿ ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಸಾವಯವ ಕೃಷಿ, ಸಾವಯವ ಉತ್ಪನ್ನಗಳ ಬಳಕೆ ಹಾಗೂ ಸಿರಿಧಾನ್ಯಗಳ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳ ಬಳಕೆಯಿಂದ ಜನರ ಆರೋಗ್ಯ ವೃದ್ಧಿಯಾಗುವುದರ ಜೊತೆಗೆ, ರೈತರಿಗೆ ಉತ್ತಮ ಮಾರುಕಟ್ಟೆ ಹಾಗೂ ಆದಾಯ ಹೆಚ್ಚಳಕ್ಕೂ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅಭಿಪ್ರಾಯಪಟ್ಟರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

19 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

23 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago