ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವರದಿಯಲ್ಲಿ ಮಧುಮೇಹ, ಮದ್ಯಪಾನ ಕುಟುಂಬದ ಹಿನ್ನೆಲೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಹಾಸನದಲ್ಲಿ ಈ ವರ್ಷ ಹೃದಯಾಘಾತ ಪ್ರಕರಣಗಳು ಕಡಿಮೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಸಾವನ್ನಪ್ಪಿದ 20 ಮಂದಿಯಲ್ಲಿ 6 ಮಂದಿ ಆಟೋ ಮತ್ತು ಕ್ಯಾಬ್ ಚಾಲಕರಾಗಿದ್ದು, ಶೇಕಡ 30 ರಷ್ಟು ಮಂದಿ ಚಾಲಕರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಮಕ್ಕಳಿಗೂ ಆರೋಗ್ಯ ತಪಾಸಣೆ ನಡೆಸಲು ಹಾಗೂ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ಗೂ ಇದಕ್ಕೂ ಸಂಬಂಧವಿಲ್ಲ ಎಂದು ಪುನರುಚ್ಛರಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel