ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

July 11, 2025
7:03 AM

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವರದಿಯಲ್ಲಿ ಮಧುಮೇಹ, ಮದ್ಯಪಾನ ಕುಟುಂಬದ ಹಿನ್ನೆಲೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಹಾಸನದಲ್ಲಿ ಈ ವರ್ಷ ಹೃದಯಾಘಾತ ಪ್ರಕರಣಗಳು ಕಡಿಮೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಸಾವನ್ನಪ್ಪಿದ 20 ಮಂದಿಯಲ್ಲಿ 6 ಮಂದಿ ಆಟೋ ಮತ್ತು ಕ್ಯಾಬ್ ಚಾಲಕರಾಗಿದ್ದು, ಶೇಕಡ 30 ರಷ್ಟು ಮಂದಿ ಚಾಲಕರೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಟೋ, ಕ್ಯಾಬ್ ಚಾಲಕರಿಗೆ ಪ್ರತ್ಯೇಕ ತಪಾಸಣೆ ಮಾಡಿಸುವಂತೆ ಸಲಹೆ ನೀಡಿದ್ದಾರೆ. ಮಕ್ಕಳಿಗೂ ಆರೋಗ್ಯ ತಪಾಸಣೆ ನಡೆಸಲು ಹಾಗೂ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ಗೂ ಇದಕ್ಕೂ ಸಂಬಂಧವಿಲ್ಲ ಎಂದು ಪುನರುಚ್ಛರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror