ಹಾಸನಾಂಬೆ ಜಾತ್ರಾ ಮಹೋತ್ಸವ ಇದೇ ಅ.24ರಿಂದ ನ 3ರವರೆಗೆ ನಡೆಯಲಿದೆ.ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಜಾತ್ರೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲಾ ಖಜಾನೆಯಿಂದ ಬಿಗಿ ಭದ್ರತೆಯಲ್ಲಿ ಹಾಸನಾಂಬ ದೇವಾಲಯಕ್ಕೆ ಆಭರಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬ ಜಾತ್ರೆಯನ್ನು ಆಚರಿಸಲಾಗುತ್ತಿದ್ದು, ಈ ವರ್ಷ 20 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮಗಳು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel