ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಡಲಾಗಿದ್ದು, ಜಿಲ್ಲೆಯ ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel