ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಂ.ಬೇವಿನಮರದ ಮಾಹಿತಿ ನೀಡಿದ್ದಾರೆ.
ಈ ಕಲಿಕಾ ಕೇಂದ್ರಗಳಲ್ಲಿ ಪಾಠಗಳು ನಡೆಸಲಾಗುತ್ತಿದೆ. ಕಲಿಕಾರ್ಥಿಗಳು ಕಲಿಕಾ ಕೇಂದ್ರಗಳಿಗೆ ಆಗಮಿಸಿ, ಅಕ್ಷರ ಕಲಿತರೆ, ಅವರ ಜೀವನದಲ್ಲಿ ಅಮೂಲ್ಯವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಬೋಧಕರು, ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಆಗಮಿಸುವಂತೆ ಮಾಡಿ, ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಪ್ರತಿ ಅನಕ್ಷರಸ್ಥ ಕಲಿಕಾರ್ಥಿಗೆ ಬಾಳಿಗೆ ಬೆಳಕು, ಸವಿಬರಹ ಪುಸ್ತಕಗಳನ್ನು ನೀಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಕಲಿಕಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಜ್ಞಾನದ ಮಟ್ಟ ಹೆಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದರು.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…