ದೇವೇಗೌಡ್ರು ಇನ್ನೂ ಏಳೆಂಟು ವರ್ಷ ಬದುಕ್ತಾರೆ | ಮತ್ತೆ ಪಾರ್ಲಿಮೆಂಟ್‍ಗೆ ಕಳಿಸ್ತೇವೆ : ರೇವಣ್ಣ

May 16, 2023
1:41 PM

ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.

ಕಾಂಗ್ರೆಸ್‍ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.

ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು
ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror