ಮಾಜಿ ಪಿಎಂ ಎಚ್.ಡಿ ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರೆದುಕೊಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನು ಮಾಡಬೇಕು ಅಂತ ನನ್ನ ಆಸೆ ಇದೆ. ನಾನು ಬದುಕಿರುವುದರೊಳಗೆ ಮಾಡಿ ತೋರಿಸ್ತೀನಿ. ಐದು ವರ್ಷಕ್ಕೆ ಮಾಡ್ತೀನೋ, ಹತ್ತು ವರ್ಷಕ್ಕೆ ಮಾಡ್ತೀನೋ. ಇಡೀ ರಾಜ್ಯದಲ್ಲಿ ಹಾಸನ ಜಿಲ್ಲೆಯನ್ನು ನಂಬರ್ ಒನ್ ಮಾಡಿ ತೋರಿಸ್ತೀನಿ. ಇಲ್ಲವಾದಲ್ಲಿ ಇನ್ನೊಂದು ಸಾರಿ ರಾಜಕೀಯಕ್ಕೆ ಬರಲ್ಲ ಎಂದು ಚಾಲೆಂಜ್ ಹಾಕಿದರು.
ಕಾಂಗ್ರೆಸ್‍ನವರು ಮಾಡಿ ಕೊಟ್ಟರೆ ಸಂತೋಷ. ಇಲ್ಲವಾದರೆ ನಮಗೂ ಟೈಂ ಬರುತ್ತೆ. ನನ್ನ ಗ್ರಹಗತಿಗಳು ಇನ್ನೂ ಚೆನ್ನಾಗಿವೆ. ದೇವೇಗೌಡರು ಇನ್ನೂ ಏಳೆಂಟು ವರ್ಷ ಬದುಕಿರುತ್ತಾರೆ. ದೇವೇಗೌಡರನ್ನು ಮತ್ತೆ ಪಾರ್ಲಿಮೆಂಟ್‍ಗೆ ಕರ್ಕಂಡು ಹೋಗಿಯೇ ಹೋಗ್ತೀವಿ. ದೇವೇಗೌಡರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸ್ತೀವಿ. ಯಾವ ಕ್ಷೇತ್ರ ಅಂತ ಮುಂದೆ ನೋಡೋಣ ಎಂದರು.
ದೇವೇಗೌಡರಿಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ. ಅವರು ನಿಲ್ಲಲ್ಲ ಅಂದ್ರು ನಾವು ಬಿಡಲ್ಲ. ಲೋಕಸಭೆ ಚುನಾವಣೆಗೆ ನಿಲ್ಲಿಸಿ, ಗೆಲ್ಲಿಸಿ ಲೋಕಸಭೆಗೆ ಕಳುಹಿಸುತ್ತೇವೆ. ಹಾಸನ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಪ್ರಜ್ವಲ್ ರೇವಣ್ಣನೇ ಸ್ಪರ್ಧೆ ಮಾಡುತ್ತಾನೆ ಎಂದು ಹೇಳಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…