ಮುನಿಸು ಮರೆತ ಎಚ್‌ಡಿ ರೇವಣ್ಣ; ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ರೆಡಿ

April 19, 2023
1:25 PM

ಕರ್ನಾಟಕ ವಿಧಾನಸಭಾ ಚುನಾವಣೆಯ ರಣಕಣ ದಿನಕಳೆಯುತ್ತಿದ್ದಂತೆ ರಂಗೇರುತ್ತಿದೆ. ಹಾಸನದಲ್ಲಿ ಜೆಡಿಎಸ್‌ ಟಿಕೆಟ್ ವಿಚಾರವಾಗಿ ಎಚ್‌ಡಿ ರೇವಣ್ಣ  ಮತ್ತು ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಮಧ್ಯೆ ಉಂಟಾದ ವೈಮನಸ್ಸಿನಿಂದ ಎಚ್‌ಡಿ ದೇವೇಗೌಡರ  ಕುಟುಂಬ ಒಡೆಯಿತು ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದಾಗಲೇ ಇದೀಗ ಎಲ್ಲವೂ ಸರಿ ಹೋಗುವತ್ತ ಜೆಡಿಎಸ್‌ ಮುಖ ಮಾಡುತ್ತಿದೆ. ಇದಕ್ಕೆ ಪೂರಕವೆಂಬಂತೆ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರು ಎಚ್‌ಡಿ ರೇವಣ್ಣರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಹೌದು.. ಆರಂಭದಲ್ಲಿ ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಅವರ ಕುಟುಂಬ ಭವಾನಿ ರೇವಣ್ಣ ಅಥವಾ ಎಚ್‌ಡಿ ರೇವಣ್ಣಗೆ ಟಿಕೆಟ್‌ ನೀಡಬೇಕು. ಆ ಮೂಲಕ ಹಾಲಿ ಶಾಸಕ ಪ್ರೀತಂ ಗೌಡರನ್ನು ಸೋಲಿಸಬೇಕು ಎಂದು ಪಣ ತೊಟ್ಟು ಟಿಕೆಟ್‌ಗೆ ಆಗ್ರಹಿಸಿತ್ತು. ಆದರೆ ಎಚ್‌ಡಿ ಕುಮಾರಸ್ವಾಮಿ ಮಾತ್ರ ಸ್ವರೂಪ್‌ಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಲ್ಲದೇ, ಸ್ವರೂಪ್‌ಗೆ ಟಿಕೆಟ್ ನೀಡುವಲ್ಲಿ ಯಶಸ್ವಿಯಾಗಿದ್ದರು.

ಮುನಿಸು ಮರೆತು ಒಂದಾದ ದಳಪತಿಗಳು : ಇದೀಗ ಈ ಜಿದ್ದಾಟವೆಲ್ಲವನ್ನೂ ಮರೆತು ಪಕ್ಷದ ಗೆಲುವೇ ಮುಖ್ಯ ಎಂದು ಅರಿತಿರುವ ಎಚ್‌ಡಿ ರೇವಣ್ಣ ಹಾಸನ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪರ ಪ್ರಚಾರಕ್ಕಿಳಿಯಲು ನಿರ್ಧಾರ ಮಾಡಿದ್ದಾರೆ. ಎಚ್‌ಡಿ ರೇವಣ್ಣ ಅವರ ಮನವೊಲಿಸುವಲ್ಲಿ ಹಾಸನ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಯಶಸ್ವಿಯಾಗಿದ್ದು, ಇದೀಗ ಎಚ್‌ಪಿ ಸ್ವರೂಪ್ ಪರ ಪ್ರಚಾರಕ್ಕೆ ಇಳಿಯಲು ಎಚ್‌ಡಿ ರೇವಣ್ಣ‌ ಮತ್ತು ಫ್ಯಾಮಿಲಿ ರೆಡಿಯಾಗಿದೆ.

ಈ ಹಿನ್ನೆಲೆ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರು ಇಂದು ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಗೂ ಹಿರಿಯರ ಸಭೆ ಕರೆದಿದ್ದು, ಈ ಸಭೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ, ಎಚ್‌ಡಿ ರೇವಣ್ಣ, ಭವಾನಿ ರೇವಣ್ಣ, ಹಾಗೂ ಎಂಎಲ್‌ಸಿ ಸೂರಜ್‌ ರೇವಣ್ಣ ಭಾಗಿಯಾಗಲಿದ್ದಾರೆ. ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಎಚ್‌ಡಿ ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಜೆಡಿಎಸ್ ಅಭ್ಯರ್ಥಿ ಎಚ್‌ಪಿ ಸ್ವರೂಪ್‌ ಅವರು ನಾಳೆ ಹಾಸನದಲ್ಲಿ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಲಿದ್ದು, ಈ ಬೃಹತ್ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ‌ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭಾಗಿಯಾಗುವ ಸಾಧ್ಯತೆ ಇದೆ.

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಬ್ಬದ ದಿನ 2 ಲಕ್ಷ ಸಸಿ ವಿತರಿಸಿದ ಅರಣ್ಯ ಇಲಾಖೆ
April 5, 2025
8:06 AM
by: The Rural Mirror ಸುದ್ದಿಜಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ಪಕೋಡ
April 5, 2025
8:00 AM
by: ದಿವ್ಯ ಮಹೇಶ್
ಹವಾಮಾನ ಕೇಂದ್ರಗಳು, ಮಳೆ ಮಾಪನ ಕೇಂದ್ರಗಳನ್ನು ಸ್ಥಾಪಿಸುವಂತೆ ಮನವಿ
April 5, 2025
7:40 AM
by: ದ ರೂರಲ್ ಮಿರರ್.ಕಾಂ
ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group