Advertisement
ಸುದ್ದಿಗಳು

ಚುನಾವಣಾ ಕಣ | ರೈತರಿಗೆ ಉಚಿತ ಆರೋಗ್ಯ, ರಸಗೊಬ್ಬರದ ಭರವಸೆ ನೀಡಿದ ಕುಮಾರಣ್ಣ |

Share

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ವಂತ ಬಲದಿಂದ ಸರ್ಕಾರ ರಚಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು, ಜೋಯಿಡಾ ಮತ್ತು ರಾಮನಗರಕ್ಕೆ ಕುಡಿಯುವ ನೀರು, ರಸ್ತೆ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

ಜೋಯಿಡಾದಲ್ಲಿ ಆಯೋಜಿಸಿದ್ದ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರಿಗಾಗಿ ಉಚಿತ ಆರೋಗ್ಯ ಸೇವೆ, ಬೀಜಗಳು, ರಸಗೊಬ್ಬರ ನೀಡುವುದು ಸೇರಿದಂತೆ ಹಲವು ಯೋಜನೆಗಳ ಕುರಿತು ಚಿಂತನೆ ನಡೆಸಲಾಗಿದೆ. ಕೃಷಿ ಮಾಡಲು ಹಣಕ್ಕಾಗಿ ಹೆಣಗಾಡುವ ರೈತರು, ಕುಟುಂಬದ ವ್ಯಕ್ತಿ ಅನಾರೋಗ್ಯಕ್ಕೀಡಾದರೆ ಲಕ್ಷಾಂತರ ಹಣ ಖರ್ಚು ಮಾಡುವುದು ನಮಗಿಷ್ಟವಿಲ್ಲ. ಹೀಗಾಗಿ ಪ್ರತೀ ರೈತನಿಗೆ ಕೃಷಿಗೆ ಎಕರೆಗೆ 10,000 ರೂ. ಮತ್ತು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರಿಗೆ ತಿಂಗಳಿಗೆ 2,000 ರೂ. ನೀಡಲು ಚಿಂತನೆ ನಡೆಸಿದ್ದೇವೆ. ಈಗಾಗಲೇ ನಾನು 25 ಜಿಲ್ಲೆಗಳಿಗೆ ಭೇಟಿ ನೀಡಿದ್ದೇನೆ. ಜನರು ಜೆಡಿಎಸ್ ಮೇಲೆ ನಂಬಿಕೆ ಇಟ್ಟಿದ್ದಾರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಗೆಲುವು ಸಾಧಿಸುವುದಿಲ್ಲ ಎಂಬು ಭಾವಿಸಿದ್ದೆವು. ಇದೀಗ ಪಕ್ಷವು ಕುಮಟಾದ ಮೂಲಕ ಗೆಲುವು ಸಾಧಿಸುವ ವಿಶ್ವಾಸವಿದೆ. 6 ಕ್ಷೇತ್ರಗಳ ಪೈಕಿ ಕನಿಷ್ಟ ಮೂರು ಕ್ಷೇತ್ರಗಳಲ್ಲಿ ಆದರೂ ನಾವು ಗೆಲುವು ಸಾಧಿಸುತ್ತೇವೆಂದು ವಿಶ್ವಾಸವ್ಯಕ್ತಪಡಿಸಿದರು.

ಜೆಡಿಎಸ್ ಟಿಕೆಟ್‌ನಲ್ಲಿ ಗೆದ್ದಿದ್ದ ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ನನ್ನ ಬೆಂಬಲದಿಂದ ಗೆದ್ದಿದ್ದಾರೆ, ಅದರ ಬಗ್ಗೆ ಈಗ ಅವರು ಮಾತನಾಡಲು ಬಯಸುವುದಿಲ್ಲ ಎಂದು ಇದೇ ವೇಳೆ ಹೆಚ್‌ಡಿಕೆ ವಾಗ್ದಾಳಿ ನಡೆಸಿದರು.

ಬಳಿಕ ಹಳಿಯಾಳ ಜೆಡಿಎಸ್ ಅಭ್ಯರ್ಥಿ ಶ್ರೀಕಾಂತ ಎಲ್.ಘೋಟ್ನೇಕರ ಅವರು, ಹಾಲಿ ಶಾಸಕ ಆರ್.ವಿ.ದೇಶಪಾಂಡೆ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶಪಾಂಡೆ ಇಲ್ಲಿಂದ ಹಲವು ಬಾರಿ ಆಯ್ಕೆಯಾದರೂ ಕ್ಷೇತ್ರಕ್ಕಾಗಿ ಏನನ್ನೂ ಮಾಡಿಲ್ಲ. ಸಿಂಗಾಪುರ ಮಾದರಿಯಲ್ಲಿ ಹಳಿಯಾಳವನ್ನು ಅಭಿವೃದ್ಧಿ ಪಡಿಸುವುದಾಗಿ ಹೇಳಿದ್ದರು. ಆದರೆ, ಕೈಗಾರಿಕಾ ಸಚಿವರಾಗಿ ಸೇವೆ ಸಲ್ಲಿಸಿದ್ದರೂ ಸಿಂಗಾಪುರ ಮಾಡಲಿಲ್ಲ. ಇದೀಗ ಹಳಿಯಾಳ ಸಿಂಗಾಪುರ ಅಲ್ಲ ಮಂಗಪುರ (ಮಂಗಗಳ ಊರು) ಆಗಿ ಮಾರ್ಪಟ್ಟಿದೆ ಎಂದು ಕಿಡಿಕಾರಿದರು.

ಅಲ್ಲದೆ, ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡ ಅವರು, ಈ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದೇ ಆದರೆ, ನೀರು, ಉತ್ತಮ ರಸ್ತೆ ಕಲ್ಪಿಸಿಕೊಡಿ ಎಂದು ಕೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

6 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

15 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago