ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ಬೆಟ್ ದ್ವಾರಕಾ ಮತ್ತು ಓಖಾ ಮುಖ್ಯಭೂಮಿಯನ್ನು ಸಂಪರ್ಕಿಸುವ ಸುಮಾರು ಎರಡೂವರೆ ಕಿಲೋಮೀಟರ್ ಉದ್ದದ ಕೇಬಲ್ ಸೇತುವೆಯನ್ನು ಪ್ರಧಾನಿ ಉದ್ಘಾಟಿಸಿದರು. ಇದಕ್ಕೂ ಮುನ್ನ ದ್ವಾರಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಆಧ್ಯಾತ್ಮಕ ಹಿರಿಮೆಯ ಪುರಾತನ ಯುಗಕ್ಕೆ ಸಂಪರ್ಕ ಹೊಂದಿದ ಅನುಭವವಾಯಿತು ಎಂದು ಬಣ್ಣಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭೂತಿ. ದೈವಿಕ ಔನ್ನತ್ಯ ಹಾಗೂ ಕಾಲಮಿತಿಯಿಲ್ಲದ ಭಕ್ತಿಯ ಪುರಾತನ ಯುಗಕ್ಕೆ ನಂಟು ಬೆಸೆದುಕೊಂಡಂತೆ ಅನಿಸಿತು. ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel