ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೩೮ ಕಡೆ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಒಟ್ಟು 24.70 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಪಿಎಂ-ಎಬಿಐಎಂ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಿಗೂ ಹೊಸ ಆಯುಷ್ಮಾನ್ ಭಾರತ್- ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಸ್ಥಾಪನೆಗೆ ಅನುದಾನ ಮಂಜೂರು ಮಾಡಲಾಗಿದೆ ಎಂದು ಹೇಳಿದ್ದಾರೆ. ಆಯುಷ್ಮಾನ್ ಭಾರತ್ ಹೆಲ್ತ್ ಸೆಂಟರ್ ಸ್ಥಾಪನೆಗೆ ತಲಾ 65 ಲಕ್ಷ ರೂಪಾಯಿ ಮಂಜೂರಾಗಿದ್ದು, ಅದರಡಿ ಸೂಕ್ತ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಒದಗಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…