ಮಿದುಳು ತಿನ್ನುವ ಅಮೀಬಾ | ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ | ಆರೋಗ್ಯ ಸಚಿವರಿಂದಲೂ ಮನವಿ

November 19, 2025
11:04 PM

ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿ ಯಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಶಬರಿಮಲೆ  ಹೊರಡುವ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ, ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸಲಹೆಗಳನ್ನು ನೀಡಿದೆ.

ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆಗೆ ನಿಂತ ನೀರು, ಕೊಳ, ಈಜು ಕೊಳಗಳು ಹಾಗೂ ಕೆರೆಗಳು.  ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲೇರಿ ಅತ್ಯಂತ ವಿಷಕಾರಿ ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಎನ್ನುವ ಅಪರೂಪದ ಗಂಭೀರ ಮತ್ತು  ಮಾರಣಾಂತಿಕ ಖಾಯಿಲೆಯನ್ನು ಉಂಟುಮಾಡುತ್ತದೆ.

ಆದ್ದರಿಂದ ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್‍ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ.  ನೀರಿನ ಸಂಪರ್ಕದ ಏಳು ದಿನಗಳ ಒಳಗೆ ಜ್ವರ ತೀವ್ರ ತಲೆನೋವು, ವಾಕರಿಕೆ,  ವಾಂತಿ, ಕುತ್ತಿಗೆ ಬಿಗಿತ, ಗೊಂದಲ,  ಮಾನಸಿಕ ಸ್ಥಿತಿಗಳಲ್ಲಿ ಬದಲಾವಣೆಗಳು ಹಾಗೂ ವ್ಯಕ್ತಿಯ ವರ್ತನೆಯಲ್ಲಿ ಅಸ್ವಸ್ಥತೆ  ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷಿಸದೆ ತುರ್ತು ಆರೈಕೆಯನ್ನು ಪಡೆಯಲು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ  ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಶಬರಿಮಲೆ ಯಾತ್ರಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ. ಕಲುಷಿತ ನೀರು ಹಾಗೂ ನಿಂತ ನೀರಿನಿಂದ ಮೆದುಳು ತಿನ್ನುವ ಅಮಿಬಾ ಸೋಂಕು ಹರಡುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ನಿಂತ ನೀರಿನಲ್ಲಿ ಸ್ನಾನ ಮಾಡುವವರಿಗೆ ಮೂಗನ್ನು ಬಿಗಿ ಹಿಡಿದು ಸ್ನಾನ ಮಾಡುವಂತೆ ತಿಳಿಸಿದ್ದಾರೆ. ಸ್ನಾನ ಮಾಡಿದ 7 ದಿನಗಳಲ್ಲಿ ವಿಪರೀತ ಜ್ವರ, ತಲೆನೋವು ಬಂದರೆ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror