ಹೊಸರುಚಿ | ಆರೋಗ್ಯಕರ ಗುಜ್ಜೆ ಕರಿ | ದೋಸೆ–ಚಪಾತಿಗೆ ಸೂಪರ್ ರುಚಿ

February 7, 2026
10:00 PM

ಗುಜ್ಜೆ ಕರಿಗೆ ಬೇಕಾಗುವ ಸಾಮಾಗ್ರಿಗಳು : ಗುಜ್ಜೆ – 1 ಕಪ್, ಆಲೂಗಡ್ಡೆ – 1 (ಚಿಕ್ಕದು, ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿದದ್ದು),  ಟೊಮೆಟೊ – 1 (ಚಿಕ್ಕದು, ಕಟ್ ಮಾಡಿದದ್ದು), ಉಪ್ಪು – ರುಚಿಗೆ ತಕ್ಕಷ್ಟು

ರುಬ್ಬಿಕೊಳ್ಳಲು (ಜಾರ್‌ನಲ್ಲಿ): ಟೊಮೆಟೊ – 2, ಈರುಳ್ಳಿ – 1, ಬೆಳ್ಳುಳ್ಳಿ – 8 ಎಸಳು, ಶುಂಠಿ – 1 ಇಂಚು

ಮಸಾಲಾ ಪುಡಿಗಳು: ಗರಂ ಮಸಾಲ – ½ ಚಮಚ, ಮೆಣಸಿನ ಪುಡಿ – ½ ಚಮಚ, ಜೀರಿಗೆ ಪುಡಿ – 1 ಚಮಚ, ಕೊತ್ತಂಬರಿ ಪುಡಿ – 1 ಚಮಚ

ಮಾಡುವ ವಿಧಾನ:  ಕುಕ್ಕರ್‌ನಲ್ಲಿ ಗುಜ್ಜೆ, ಆಲೂಗಡ್ಡೆ, 1 ಟೊಮೆಟೊ, ಉಪ್ಪು ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಜಾರ್‌ನಲ್ಲಿ 2 ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಜೀರಿಗೆ ಹಾಕಿ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಫ್ರೈ ಮಾಡಿ. ಈಗ ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೇಯಿಸಿದ ಗುಜ್ಜೆ–ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ ಮತ್ತೆ ಕುದಿಸಿ.  ಬಿಸಿ ಬಿಸಿಯಾದ ದೋಸೆ, ಚಪಾತಿ ಅಥವಾ ಅಕ್ಕಿ ಅನ್ನದ ಜೊತೆ ಸೂಪರ್!……  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ…

ಹೊಸರುಚಿ | ಮನೆಯಲ್ಲೇ ಮಾಡಿ ‘ಪೇಪರ್ ಅವಲಕ್ಕಿ ಚೂಡಾ’

ನಿಮ್ಮ ಅಭಿಪ್ರಾಯಗಳಿಗೆ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror