ಗುಜ್ಜೆ ಕರಿಗೆ ಬೇಕಾಗುವ ಸಾಮಾಗ್ರಿಗಳು : ಗುಜ್ಜೆ – 1 ಕಪ್, ಆಲೂಗಡ್ಡೆ – 1 (ಚಿಕ್ಕದು, ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿದದ್ದು), ಟೊಮೆಟೊ – 1 (ಚಿಕ್ಕದು, ಕಟ್ ಮಾಡಿದದ್ದು), ಉಪ್ಪು – ರುಚಿಗೆ ತಕ್ಕಷ್ಟು
ರುಬ್ಬಿಕೊಳ್ಳಲು (ಜಾರ್‌ನಲ್ಲಿ): ಟೊಮೆಟೊ – 2, ಈರುಳ್ಳಿ – 1, ಬೆಳ್ಳುಳ್ಳಿ – 8 ಎಸಳು, ಶುಂಠಿ – 1 ಇಂಚು
ಮಸಾಲಾ ಪುಡಿಗಳು: ಗರಂ ಮಸಾಲ – ½ ಚಮಚ, ಮೆಣಸಿನ ಪುಡಿ – ½ ಚಮಚ, ಜೀರಿಗೆ ಪುಡಿ – 1 ಚಮಚ, ಕೊತ್ತಂಬರಿ ಪುಡಿ – 1 ಚಮಚ
ಮಾಡುವ ವಿಧಾನ: ಕುಕ್ಕರ್‌ನಲ್ಲಿ ಗುಜ್ಜೆ, ಆಲೂಗಡ್ಡೆ, 1 ಟೊಮೆಟೊ, ಉಪ್ಪು ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಜಾರ್‌ನಲ್ಲಿ 2 ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಜೀರಿಗೆ ಹಾಕಿ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಫ್ರೈ ಮಾಡಿ. ಈಗ ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೇಯಿಸಿದ ಗುಜ್ಜೆ–ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ ಮತ್ತೆ ಕುದಿಸಿ. ಬಿಸಿ ಬಿಸಿಯಾದ ದೋಸೆ, ಚಪಾತಿ ಅಥವಾ ಅಕ್ಕಿ ಅನ್ನದ ಜೊತೆ ಸೂಪರ್!…… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ನಿಮ್ಮ ಅಭಿಪ್ರಾಯಗಳಿಗೆ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…