ಹಾಸನದಲ್ಲಿ ಹೃದಯಾಘಾತ ಪ್ರಕರಣ | ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ

July 2, 2025
9:36 PM

ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿದೆ.  ಇದೇ ವೇಳೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಸಾವು ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ.  ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮಿತಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Advertisement
Advertisement

ಇದೇ ವೇಳೆ  ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ 18 ರಿಂದ 45 ವರ್ಷ ವಯಸ್ಸಿನ ಯುವಕರ ಬಗ್ಗೆ ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಾಮಾಣಿಕ ಸಾಕ್ಷ್ಯವಿಲ್ಲದೆ ಲಸಿಕೆಗಳ ಬಗ್ಗೆ ಹರಡುವ ಊಹಾಪೋಹಗಳು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇದು ಕೋವಿಡ್ ಸಂಕಟದ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಿದ ಲಸಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group