ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳು ಭಾರತದಲ್ಲಿ ಕೋವಿಡ್-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿದೆ. ಇದೇ ವೇಳೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಸಾವು ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಲಾಗಿದೆ. ಚಿಕ್ಕಬಳ್ಳಾಪುರ ತಾಲ್ಲೂಕು ನಂದಿ ಗ್ರಾಮದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮಿತಿ ವರದಿ ನೀಡಿದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ಕೋವಿಡ್ ಲಸಿಕೆ ಮತ್ತು ಹಠಾತ್ ಸಾವುಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ಅಧ್ಯಯನಗಳು ದೃಢಪಡಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ.ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ 18 ರಿಂದ 45 ವರ್ಷ ವಯಸ್ಸಿನ ಯುವಕರ ಬಗ್ಗೆ ವಿಭಿನ್ನ ಸಂಶೋಧನಾ ವಿಧಾನಗಳನ್ನು ಬಳಸಿಕೊಂಡು ಎರಡು ಪೂರಕ ಅಧ್ಯಯನಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಾಮಾಣಿಕ ಸಾಕ್ಷ್ಯವಿಲ್ಲದೆ ಲಸಿಕೆಗಳ ಬಗ್ಗೆ ಹರಡುವ ಊಹಾಪೋಹಗಳು ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಇದು ಕೋವಿಡ್ ಸಂಕಟದ ಸಮಯದಲ್ಲಿ ಲಕ್ಷಾಂತರ ಜೀವಗಳನ್ನು ರಕ್ಷಿಸಿದ ಲಸಿಕೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅಪಾಯಕಾರಿಯಾಗಿದೆ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.
ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…
ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…
ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …
ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ ಜುಲೈ 22 ರಂದು ಮಾವಿನಹಣ್ಣಿನ…
ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…
ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…